ಪುಣೆ : ಹಿರಿಯ ಕಾಂಗ್ರೆಸ್ ನಾಯಕ ಮತ್ತು ಮಾಜಿ ಕೇಂದ್ರ ಸಚಿವ ಸುರೇಶ್ ಕಲ್ಮಾಡಿ ಅವರು ದೀರ್ಘಕಾಲದ ಅನಾರೋಗ್ಯದಿಂದ ಇಂದು (ಮಂಗಳವಾರ) ಮುಂಜಾನೆ ಪುಣೆಯಲ್ಲಿ ನಿಧನರಾದರು. ಅವರಿಗೆ 81 ವರ್ಷವಾಗಿತ್ತು.
ಬೆಳಗಿನ ಜಾವ 3.30ಕ್ಕೆ ಕೊನೆಯುಸಿರೆಳೆದಿದ್ದಾರೆ ಎಂದು ಕಲ್ಮಾಡಿ ಅವರ ಕುಟುಂಬದ ಮೂಲಗಳು ತಿಳಿಸಿವೆ.
ಕಲ್ಮಾಡಿ ಅವರ ಪಾರ್ಥಿವ ಶರೀರವನ್ನು ಇಲ್ಲಿನ ಎರಾಂಡವಾನೆ ಪ್ರದೇಶದ ಕಲ್ಮಾಡಿ ಮನೆಯಲ್ಲಿ ಮಧ್ಯಾಹ್ನ 2 ಗಂಟೆಯವರೆಗೆ ಇರಿಸಲಾಗುವುದು ಎಂದು ಮೂಲಗಳು ತಿಳಿಸಿವೆ. ಮಧ್ಯಾಹ್ನ 3.30ಕ್ಕೆ ನವಿ ಪೇತ್‌ನಲ್ಲಿರುವ ವೈಕುಂಠ ಚಿತಾಗಾರದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.
ಎರಡು ಬಾರಿ ಸಂಸದರಾಗಿ ಆಯ್ಕೆಯಾಗಿದ್ದ ಕಲ್ಮಾಡಿ, ವಿ. ನರಸಿಂಹ ರಾವ್ ಸರ್ಕಾರದಲ್ಲಿ ಕೇಂದ್ರ ರೈಲ್ವೆ ರಾಜ್ಯ ಸಚಿವರಾಗಿ ರೈಲ್ವೆ ಬಜೆಟ್ ಅನ್ನು ಮಂಡಿಸಿದ್ದರು. 1996 ರಿಂದ 2012 ರವರೆಗೆ ಭಾರತೀಯ ಒಲಿಂಪಿಕ್ ಅಸೋಸಿಯೇಷನ್‌ನ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.
ಸುರೇಶ್ ಕಲ್ಮಾಡಿ ಅವರು ಮಂಗಳೂರು ಮೂಲದ ಡಾ. ಕೆ. ಶಾಮರಾವ್ ಕಲ್ಮಾಡಿ ಮತ್ತು ಶಾಂತಾ ರಾವ್ ಕಲ್ಮಾಡಿ ಅವರ ಮಗ. ಬಾಲ್ಯ ಜೀವನವನ್ನು ಪುಣೆಯಲ್ಲಿ ಕಳೆದ ಅವರು, ಪುಣೆ ಲೋಕಸಭಾ ಕ್ಷೇತ್ರದಿಂದ ಅನೇಕ ಬಾರಿ ಚುನಾವಣೆ ಎದುರಿಸಿದ್ದಾರೆ. 2014ರಿಂದ ಚುನಾವಣಾ ರಾಜಕೀಯದಿಂದ ದೂರ ಸರಿದಿದ್ದರು.

