ಕುಂಬಳೆ: ಬೆಳೆಯುವ ಯುವ ತಲೆಮಾರಿಗೆ ಹೆತ್ತವರೇ ಮೂಲ ಮಾದರಿ. ಸಮಾಜ ಮತ್ತು ಪರಿಸರಗಳೂ ಪ್ರಭಾವ ಬೀರಿ ಬೆಳವಣಿಗೆಯಲ್ಲಿ ಪಾತ್ರ ವಹಿಸುತ್ತದೆ. ಪರಸ್ಪರ ಪ್ರೀತಿ, ಗೌರವಗಳಿಂದ ನಡೆದುಕೊಂಡಾಗ ಸ್ವಸ್ಥ ಸಮಾಜ ನಿರ್ಮಾಣವಾಗುತ್ತದೆ ಎಂದು ಜಿಲ್ಲಾ ಕುಟುಂಬ ಪ್ರಭೋದನ್ ಸಂಯೋಜಕ ಅನಂತಪದ್ಮನಾಭ ಕೂಡ್ಳು ಅಭಿಪ್ರಾಯ ವ್ಯಕ್ತಪಡಿಸಿದರು.
ಮುಜುಂಗಾವು ಶ್ರೀ ಭಾರತಿ ವಿದ್ಯಾಪೀಠದಲ್ಲಿ ಶನಿವಾರ ಆಯೋಜಿಸಲಾಗಿದ್ದ ರಕ್ಷಕ ದಿನಾಚರಣೆ (ಪೇರೆಂಟ್ಸ್ ಡೇ) ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದು ಅವರು ಮಾತನಾಡಿದರು. ಅವರು ಮಕ್ಕಳು ಹಾಗೂ ಹೆತ್ತವರ ನಡುವಿನ ಭಾಂದವ್ಯದ ಕುರಿತು ವಿವರಿಸಿದರು.
ಈ ಸಂಧರ್ಭದಲ್ಲಿ ಹೆತ್ತವರಿಂದ ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಿತು. ಹಾಗೂ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಿದ್ದು ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ನೀಡಲಾಯಿತು.
ಕಾರ್ಯಕ್ರಮದಲ್ಲಿ ಶಾಲಾ ಆಡಳಿತ ಸಮಿತಿ ಅಧ್ಯಕ್ಷ ಸುಬ್ರಹ್ಮಣ್ಯ ಭಟ್ ಬೆಜಪ್ಪೆ, ರಕ್ಷಕ- ಶಿಕ್ಷಕ ಸಂಘದ ಅಧ್ಯಕ್ಷ ಉದಯಕುಮಾರ್ ಮಾಯಿಪ್ಪಾಡಿ, ಶಾಲಾ ಆಡಳಿತ ಸಮಿತಿಯ ಕಾರ್ಯದರ್ಶಿ ಎಚ್.ಎಸ್. ಪ್ರಸಾದ್, ಜೊತೆ ಕಾರ್ಯದರ್ಶಿ ಬಾಲಕೃಷ್ಣ ಶರ್ಮ ಅನಂತಪುರ, ಮಾತೃ ಮಂಡಳಿಯ ಅಧ್ಯಕ್ಷೆ ದೀಪಶ್ರೀ ದೊಡ್ಡಮಾಣಿ ಹಾಗೂ ಮುಖ್ಯ ಶಿಕ್ಷಕ ಶ್ಯಾಮ್ ಭಟ್ ದರ್ಬೆಮಾರ್ಗ, ಸಹ ಮುಖ್ಯ ಶಿಕ್ಷಕಿ ಚಿತ್ರಸರಸ್ವತಿ ಹಾಗೂ ಅಧ್ಯಾಪಕ ವೃಂದ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ದೀಪಶ್ರೀ ದೊಡ್ಡಮಾಣಿ ಶರ್ಮಿಳ ಅವರು ನಡೆಸಿಕೊಟ್ಟರು.

.jpg)
.jpg)
.jpg)
