HEALTH TIPS

ಕಡೆಂಗೋಡ್ಲು ಪ್ರಶಸ್ತಿಗೆ ಕವನ ಸಂಕಲನಗಳ ಆಹ್ವಾನ

ಉಡುಪಿ: ನಾಡಿನ ಹಿರಿಯ ಕವಿ, ಪತ್ರಕರ್ತ, ಕಡೆಂಗೋಡ್ಲು ಶಂಕರ ಭಟ್ಟರ ನೆನಪಿನಲ್ಲಿ 1978ರಲ್ಲಿ ಸ್ಥಾಪಿತವಾದ 'ಕಡೆಂಗೋಡ್ಲು ಕಾವ್ಯ ಪ್ರಶಸ್ತಿ'ಗೆ ಈ ವರ್ಷ ಅಪ್ರಕಟಿತ ಕನ್ನಡ ಕವನ ಸಂಕಲಗಳನ್ನು ಆಹ್ವಾನಿಸಲಾಗಿದೆ.

ಉಡುಪಿಯ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರದ ಮೂಲಕ ನೀಡಲಾಗುವ ಈ ಪ್ರಶಸ್ತಿಗೆ ಕವನ ಸಂಕಲನಗಳನ್ನು ಕಳುಹಿಸಲು ಮಾಚ್ 15 ಕೊನೆಯ ದಿನವಾಗಿರುತ್ತದೆ.

ಕಳುಹಿಸಬೇಕಾದ ವಿಳಾಸ: ಆಡಳಿತಾಧಿಕಾರಿ, ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರ, ಎಂ.ಜಿ.ಎಂ. ಕಾಲೇಜು ಆವರಣ, ಉಡುಪಿ-576102.

ಕಾವ್ಯ ಪ್ರಕಟನೆಗೆ ನೆರವು ನೀಡಿ ಪ್ರೋತ್ಸಾಹಿಸುವ ಉದ್ದೇಶದಿಂದ 10,000 ರೂ.ಗಳ ಒಂದು ವಾರ್ಷಿಕ ಬಹುಮಾನ ವನ್ನು ನೀಡಲಾಗುತ್ತದೆ. ಹಸ್ತಪ್ರತಿ ಹಂತದದಲ್ಲಿರುವ 40ಕ್ಕೆ ಕಡಿಮೆ ಇಲ್ಲದ, 50ಕ್ಕಿಂತ ಹೆಚ್ಚಿಲ್ಲದ ಕನ್ನಡ ಕತೆಗಳ ಅತ್ಯುತ್ತಮ ಸಂಗ್ರಹಕ್ಕೆ ಈ ಬಹುಮಾನವನ್ನು ನೀಡಲಾಗುತ್ತದೆ. ತಜ್ಞರ ಸಮಿತಿ ಬಹುಮಾನಕ್ಕೆ ಅರ್ಹವಾದ ಕೃತಿ ಯನ್ನು ಆಯ್ಕೆ ಮಾಡಲಿದೆ. ಈ ಕುರಿತು ಹೆಚ್ಚಿನ ಮಾಹಿತಿಗೆ ಬ್ಲಾಗ್: https://govindapairesearch.blogspot.com- ಅಥವಾ ದೂರವಾಣಿ ಸಂಖ್ಯೆ/ಮೊಬೈಲ್ ನಂ. 9448868868/ 9449471449; ಕಛೇರಿ: 0820-2521159ನ್ನು ಸಂಪರ್ಕಿಸಬಹುದು ಎಂದು ಕೇಂದ್ರದ ಪ್ರಕಟಣೆ ತಿಳಿಸಿದೆ.

ಸ್ಪರ್ಧೆಯ ನಿಯಮಗಳು: ಕಳೆದ ಐದು ವರ್ಷಗಳಲ್ಲಿ ಬರೆದ ಕನ್ನಡ ಕವಿತೆಗಳು ಬಿಡಿಯಾಗಿ ಪತ್ರಿಕೆಗಳಲ್ಲಿ ಪೂರ್ವ ಪ್ರಕಟಿತವಾದುವು ಇರಬಹುದು, ಹೊಸದಾಗಿ ರಚಿತವಾದುವೂ ಇರಬಹುದು. ಕವನ ಸಂಕಲನ ದಲ್ಲಿ ಕನಿಷ್ಠ 40 ಕವನಗಳು ಇರಲೇಬೇಕು. ಕವನಗಳು ಯಾವುದೇ ಕವನ ಸಂಕಲನದಲ್ಲಿ ಈ ಮೊದಲು ಪ್ರಕಟಗೊಂಡಿರಬಾರದು. ಕವನ ಸಂಕಲನದ ಹೆಸರನ್ನು ಹೊರಭಾಗದಲ್ಲಿ ಮಾತ್ರ ಸ್ಪಷ್ಟವಾಗಿ ನಮೂದಿಸಿರಬೇಕು.

ಕವನ ಸಂಕಲನವನ್ನು ಮರಳಿ ಪಡೆಯಲಿಚ್ಛಿಸುವವರು ಸಾಕಷ್ಟು ಅಂಚೆಚೀಟಿ ಯನ್ನು ಅಂಟಿಸಿದ ಲಕೋಟೆಯನ್ನು ಕಡ್ಡಾಯವಾಗಿ ಲಗತ್ತಿಸಿರಬೇಕು. ಲೇಖಕರು ತಮ್ಮ ಕವನಗಳ ಸಂಗ್ರಹದ ಒಂದು ನಕಲು ಪ್ರತಿಯನ್ನು(ಬೆರಳಚ್ಚು ಮಾಡಿದ) 2026 ಮಾರ್ಚ್ 15ರ ಒಳಗೆ ಸಮಿತಿಯ ವಿಳಾಸಕ್ಕೆ ಕಳುಹಿಸಬೇಕು. ಬಹುಮಾನಕ್ಕೆ ಆಯ್ಕೆಯಾದ ಕವನ ಸಂಕಲನವವನ್ನು-ಡೆಮ್ಮಿ 1/8, 1/12 ಅಥವಾ 1/8 ಆಕಾರದಲ್ಲಿ ಮುದ್ರಿಸಿರಬೇಕು ಎಂದು ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರದ ಆಡಳಿತಾಧಿಕಾರಿ ಡಾ.ಬಿ. ಜಗದೀಶ್ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries