ಕಾಸರಗೋಡು: ಚಿನ್ಮಯ ವಿದ್ಯಾಲಯದಲ್ಲಿ 76ನೇ ಗಣರಾಜ್ಯೋತ್ಸವ ಆಚರಿಸಲಾಯಿತು. ಕೇರಳ ಚಿನ್ಮಯ ಮಿಷನಿನ ಮುಖ್ಯಸ್ಥ ಹಾಗೂ ಕಾಸರಗೋಡು ಚಿನ್ಮಯ ವಿದ್ಯಾಲಯದ ಅಧ್ಯಕ್ಷರಾದ ಶ್ರೀ
ವಿವಿಕ್ತಾನಂದ ಸರಸ್ವತಿ ಧ್ವಜಾರೋಹಣ ನೆರವೇರಿಸಿದ ನಂತರ ಮಾತನಾಡಿ, ಸಂವಿಧಾನದ ಹಕ್ಕು ಮತ್ತು ಕರ್ತವ್ಯವನ್ನು ಪಾಲಿಸುವುದು ನಮ್ಮ ಕರ್ತವ್ಯವಾಗಬೇಕು. ಜೀವನದಲ್ಲಿ ಶಾಂತಿ, ಸಮಾಧಾನ, ಸಂತೋಷವನ್ನು ಕಾಣಬೇಕಾದರೆ ಶಿಸ್ತು ಅತೀ ಮುಖ್ಯ ಎಂದು ತಿಳಿಸಿದರು.
ಶಾಲಾ ಪ್ರಾಂಶುಪಾಲ ಸುಕುಮಾರನ್ ಟಿ.ವಿ,ಮುಖ್ಯ ಶಿಕ್ಷಕಿಯರಾದ ಪೂರ್ಣಿಮಾ ಎಸ್.ಆರ್, ಶ್ರೀಮತಿ ಸಿಂಧು ಶಶಿಂದ್ರನ್, ಶಾಲಾ ಶಿಕ್ಷಕರು, ಶಿಕ್ಷಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳ ಹೆತ್ತವರು ಪಾಲ್ಗೊಂಡಿದ್ದರು.
ವಿದ್ಯಾರ್ಥಿನಿಯರಾದ ಲಕ್ಷ್ಮಿ ಅನೋಕಿ ಸ್ವಾಗತಿಸಿದರು. ಲಿಝ ಫಾತಿಮಾ ಕಾರ್ಯಕ್ರಮವನ್ನು ನಿರೂಪಿಸಿದರು. ನಿವೇದ್ಯ ವಾಮನ್ ವಂದಿಸಿದರು. ಈ ಸಂದರ್ಭ ಶಾಲಾ ವಿದ್ಯಾರ್ಥಿಗಳಿಂದ ಪ್ರದರ್ಶನಗೊಂಡ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಪ್ರೇಕ್ಷಕರ ಮನರಂಜಿಸಿತು.


