ಮಾಜಿ ಮುಖ್ಯಮಂತ್ರಿ ಕೇಜ್ರಿವಾಲ್ ಮತ್ತು ರಾಜ್ಯಸಭಾ ಸದಸ್ಯ ಸಂಜಯ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆಗೆ ನ್ಯಾಯಮೂರ್ತಿ ಎಂ.ಆರ್. ಮೆಂಗಡೆ ಅವರ ಏಕಸದಸ್ಯ ಪೀಠ ನಿರಾಕರಿಸಿತು.
ಪ್ರಧಾನಿ ಮೋದಿ ಅವರ ಪದವಿ ವ್ಯಾಸಂಗಕ್ಕೆ ಸಂಬಂಧಿಸಿ ಎಎಪಿ ನಾಯಕರು ವಿಶ್ವವಿದ್ಯಾಲಯದ ಕುರಿತು ವ್ಯಂಗ್ಯ ಮತ್ತು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಗುಜರಾತ್ ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ಪೀಯೂಷ್ ಪಾಟೇಲ್ ಮಾನನಷ್ಟ ದೂರು ನೀಡಿದ್ದರು.
ತಮ್ಮ ವಿರುದ್ಧದ ಆರೋಪಗಳು ವಿಭಿನ್ನವಾಗಿವೆ ಮತ್ತು ಘಟನೆ ನಡೆದ ದಿನಾಂಕಗಳು ಬೇರೆ ಬೇರೆಯಾಗಿವೆ ಎನ್ನುವುದೂ ಸೇರಿದಂತೆ ವಿವಿಧ ವಿಚಾರಗಳ ಆಧಾರದಲ್ಲಿ ಇಬ್ಬರ ವಿಚಾರಣೆಯನ್ನು ಪ್ರತ್ಯೇಕವಾಗಿ ನಡೆಸಬೇಕು ಎಂದು ಕೇಜ್ರಿವಾಲ್ ಮತ್ತು ಸಂಜಯ್ ಕೋರಿದ್ದರು. ಅವರಿಬ್ಬರ ಮನವಿಯನ್ನು ನಗರ ಮತ್ತು ಸೆಷನ್ಸ್ ನ್ಯಾಯಾಲಯಗಳು ತಿರಸ್ಕರಿಸಿದ್ದವು.
ಇಬ್ಬರ ವಿರುದ್ಧದ ಪ್ರಕರಣಗಳು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 500ರ ವ್ಯಾಪ್ತಿಗೆ ಬರುವುದು ಮೇಲ್ನೋಟಕ್ಕೆ ಕಂಡುಬಂದಿರುವ ಕಾರಣ ನ್ಯಾಯಾಲಯ ಇಬ್ಬರಿಗೂ ಸಮನ್ಸ್ ಜಾರಿಗೊಳಿಸಿದೆ.

