ಕುಂಬಳೆ: ಸೂರಂಬೈಲು ಸರ್ಕಾರಿ ಪ್ರೌಢಶಾಲೆಯಲ್ಲಿ ಗಣರಾಜ್ಯೋತ್ವವವನ್ನು ಸಂಭ್ರಮದಿಂದ ಆಚರಿಸಲಾಯಿತು. ಮುಖ್ಯೋಪಾಧ್ಯಾಯಿನಿ ಸುನೀತ ಎ. ಧ್ವಜಾರೋಹಣ ನಡೆಸಿ ಸಂದೇಶ ನೀಡಿದರು. ಕಾಸರಗೋಡು ಜಿಲ್ಲಾ ಪಂಚಾಯತಿ ಸದಸ್ಯ ಸೋಮಶೇಖರ ಜೆ.ಎಸ್. ಕಾರ್ಯಕ್ರಮ ಉದ್ಘಾಟಿಸಿದರು.
ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಮೊಯ್ದು ಸೀತಾಂಗೋಳಿ ಅಧ್ಯಕ್ಷತೆ ವಹಿಸಿದ್ದರು. ಮಂಜೇಶ್ವರ ಬ್ಲಾಕ್ ಪಂಚಾಯತಿ ಸದಸ್ಯ ಮುಹಮ್ಮದ್ ಜುನೈದ್ ಎಂ.ಕೆ, ಪುತ್ತಿಗೆ ಗ್ರಾಮ ಪಂಚಾಯತಿ ಸದಸ್ಯ ಸತೀಶ್ ಪೆರ್ಣೆ ಮುಖ್ಯ ಅತಿಥಿಗಳಾಗಿದ್ದರು. ರಕ್ಷಕ ಶಿಕ್ಷಕ ಸಂಘದ ಸದಸ್ಯ ದಯಾನಂದ ಪೆರ್ಣೆ ಶುಭಾಶಂಸನೆಗೈದರು. ಮುಖ್ಯೋಪಾಧ್ಯಾಯಿನಿ ಸುನೀತ ಎ ಸ್ವಾಗತಿಸಿ, ನೌಕರ ಸಂಘದ ಕಾರ್ಯದರ್ಶಿ ಕಿರಣ್ ಕೆ. ವಂದಿಸಿದರು. ರಾಧಾಕೃಷ್ಣ ಬಂಬ್ರಾಣ, ಶಾಲಾ ನಾಯಕಿ ಶ್ರದ್ಧಾ ಎ.ಯಸ್ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ತ್ರಿಸ್ತರ ಪಂಚಾಯತಿ ಚುನಾವಣೆಯಲ್ಲಿ ಜಯಗಳಿಸಿದ ಸದಸ್ಯರನ್ನು ಶಾಲು ಹೊದೆಸಿ ಅಭಿನಂದಿಸಲಾಯಿತು.

.jpg)
.jpg)
