ಕಾಸರಗೋಡು: ಜಿಲ್ಲಾ ಪಂಚಾಯಿತಿ ಸ್ಥಾಯಿ ಸಮಿತಿಗೆ ಮಹಿಳಾ ಸದಸ್ಯರ ಆಯ್ಕೆ ಪ್ರಕ್ರಿಯೆ ನಡೆಸಲಾಗಿದೆ. ಹತ್ತನೇ ವಿಭಾಗ ಚೆರ್ವತ್ತೂರಿನ ಡಾ. ಸೆರೆನಾ ಸಲಾಂ ಅವರನ್ನು ಆರೋಗ್ಯ ಶಿಕ್ಷಣ ಸ್ಥಾಯಿ ಸಮಿತಿಗೆ ಆಯ್ಕೆ ಮಾಡಲಾಯಿತು.
ಅಭಿವೃದ್ಧಿ ವ್ಯವಹಾರಗಳ ಸ್ಥಾಯಿ ಸಮಿತಿಗೆ 13ನೇ ವಿಭಾಗ ಬೇಕಲದ ಟಿ.ವಿ.ರಾಧಿಕಾ, ಕಲ್ಯಾಣ ವ್ಯವಹಾರಗಳ ಸ್ಥಾಯಿ ಸಮಿತಿಗೆ 6ನೇ ವಿಭಾಗ ಕಲ್ಲಾರ್‍ನ ರೀನಾ ಥಾಮಸ್ ಅವರನ್ನು ಆಯ್ಕೆ ಮಾಡಲಾಯಿತು. ನಾಲ್ಕನೇ ಡಿವಿಶನ್ ದೇಲಂಪಾಡಿಯ ಓ. ವತ್ಸಲಾ ಅವರನ್ನು ಲೋಕೋಪಯೋಗಿ ಸ್ಥಾಯೀ ಸಮಿತಿಗೆ ಆಯ್ಕೆ ಮಾಡಲಾಯಿತು. ಹೆಚ್ಚುವರಿ ಜಿಲ್ಲಾ ದಂಡಾಧಿಕಾರಿ(ಎಡಿಎಂ)ಪಿ. ಅಖಿಲ್, ಜಿಲ್ಲಾ ಪಂಚಾಯಿತಿ ಕಾರ್ಯದರ್ಶಿ ಎಸ್. ಬಿಜು ಮತ್ತು ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗಳು ಚುನಾವಣಾ ಪ್ರಕ್ರಿಯೆಯಲ್ಲಿ ಭಾಗವಹಿಸಿದ್ದರು.

