ಬದಿಯಡ್ಕ: ಇತ್ತೀಚೆಗೆ ಮುಳ್ಳೇರಿಯದಲ್ಲಿ ನಡೆದ ಕುಂಬಳೆ ಉಪಜಿಲ್ಲಾ ಮಟ್ಟದ ಕಲೋತ್ಸವದಲ್ಲಿ ಎಲ್.ಪಿ ವಿಭಾಗದ ಸ್ಪರ್ಧೆಗಳಲ್ಲಿ ಸಮಗ್ರ ಚಾಂಪಿಯನ್ ಶಿಪ್ ಮತ್ತು ಕನ್ನಡ ವಿಭಾಗದ ಸ್ಪರ್ಧೆಗಳಲ್ಲಿ ರನ್ನರ್ ಅಪ್ ಚಾಂಪಿಯನ್ ಶಿಪ್ ಪಡೆದು ಸಾಧನೆ ಮಾಡಿದ ಮಕ್ಕಳಿಗೆ ಮತ್ತು ಉಪಜಿಲ್ಲಾ ಮಟ್ಟದ ವಿಜ್ಞಾನೋತ್ಸವದಲ್ಲಿ ವಿಜೇತರಾದ ಮಕ್ಕಳಿಗೆ ಅಭಿನಂದನಾ ಕಾರ್ಯಕ್ರಮ ನೀರ್ಚಾಲು ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ಜರಗಿತು.
ಮುಖ್ಯ ಅತಿಥಿಯಾಗಿ ಶಾಲಾ ಪ್ರಬಂಧಕ ಜಯದೇವ ಖಂಡಿಗೆ ಉಪಸ್ಥಿತರಿದ್ದರು. ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಪ್ರಶಾಂತ್ ಕುಮಾರ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಮಾತೃ ಮಂಡಳಿ ಅಧ್ಯಕ್ಷೆ ಕಾವ್ಯಶ್ರೀ ಶುಭಹಾರೈಸಿದರು. ಶಾಲಾ ಕಲೋತ್ಸವ ಮತ್ತು ವಿಜ್ಞಾನೋತ್ಸವದಲ್ಲಿ ಸಾಧನೆ ಮಾಡಿದ ಮಕ್ಕಳಿಗೆ ಬಹುಮಾನಗಳನ್ನು ನೀಡಿ ಅಭಿನಂದಿಸಲಾಯಿತು. ಶಾಲಾ ಮುಖ್ಯೋಪಾಧ್ಯಾಯಿನಿ ಮಾಲತಿ ವೈ ಸ್ವಾಗತಿಸಿ, ಶಿಕ್ಷಕಿ ವೈಷ್ಣವಿ ವಂದಿಸಿದರು. ಶಿಕ್ಷಕಿ ವೀಕ್ಷಿತ ನಿರೂಪಿಸಿದರು. ಮಕ್ಕಳಿಗೆ ಸಿಹಿ ತಿಂಡಿಗಳನ್ನು ವಿತರಿಸಲಾಯಿತು.

.jpg)
