ಬದಿಯಡ್ಕ: ಅಗಲ್ಪಾಡಿ ಶ್ರೀ ಅನ್ನಪೂರ್ಣೇಶ್ವರಿ ಹೈಯರ್ ಸೆಕೆಂಡರಿ ಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗಾಗಿ ಇತ್ತೀಚೆಗೆ ಮೂರು ಗಂಟೆಗಳ ಕಾಲ ಸುದೀರ್ಘ `ಪ್ರೇರಣಾ ತರಗತಿ'ಯನ್ನು ಹಮ್ಮಿಕೊಳ್ಳಲಾಗಿತ್ತು. ರಾಜ್ಯ ಮಟ್ಟದ ತರಬೇತುದಾರರು, ಕೇಂದ್ರೀಯ ವಿದ್ಯಾಲಯದ ನಿವೃತ್ತ ಮುಖ್ಯೋಪಾಧ್ಯಾಯ ಹಾಗೂ ರಾಷ್ಟ್ರ ಪ್ರಶಸ್ತಿ ವಿಜೇತರಾದ ಎಸ್. ಎನ್. ಭಟ್ ಸೈಪಂಗಲ್ಲು ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಸಿದ್ಧತೆಯ ಬಗ್ಗೆ ಮಾರ್ಗದರ್ಶನ ನೀಡಿದರು. ಜೀವನದ ಆರಂಭಿಕ ಹಂತದಲ್ಲಿ ಸೋಲುಂಡು, ನಂತರ ಅಸಾಧಾರಣ ಸಾಧನೆ ಮಾಡಿದ ವ್ಯಕ್ತಿಗಳ ಜೀವನದ ಸ್ಪೂರ್ತಿದಾಯಕ ಕಥೆಗಳನ್ನು ವಿವರಿಸಿದರು. ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಲು ತಮ್ಮ ಗುರಿಗಳನ್ನು ಹೇಗೆ `ಸ್ಮಾರ್ಟ್' ಆಗಿ ರೂಪಿಸಿಕೊಳ್ಳಬೇಕು ಎಂಬುದನ್ನು ಸುಂದರವಾದ ದೃಶ್ಯಾವಳಿಗಳ ಮೂಲಕ ಮನದಟ್ಟು ಮಾಡಿಕೊಟ್ಟರು.
ಪಠ್ಯವನ್ನು ಸುಲಭವಾಗಿ ನೆನಪಿಟ್ಟುಕೊಳ್ಳುವ ವಿವಿಧ ತಂತ್ರಗಳು ಮತ್ತು ಸ್ಮರಣ ಶಕ್ತಿ ಹೆಚ್ಚಿಸುವ ವಿಧಾನಗಳ ಬಗ್ಗೆ ಮಾಹಿತಿ ನೀಡಿದರು. ವಿದ್ಯಾರ್ಥಿಗಳು ದೈನಂದಿನ ಅಭ್ಯಾಸದಲ್ಲಿ ಪಾಲಿಸಬೇಕಾದ ಮಾದರಿ ವೇಳಾಪಟ್ಟಿ ಮತ್ತು ಪರೀಕ್ಷಾ ತಯಾರಿಯ ಸೂತ್ರಗಳನ್ನು ವಿವರಿಸಿದರು. ಶಿಕ್ಷಕರು ಹಾಗೂ ಹತ್ತನೇ ತರಗತಿಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

.jpg)
