ಕಾಸರಗೋಡು: ಪ್ರೆಸ್ ಕ್ಲಬ್ ವತಿಯಿಂದ ಕೆ.ಎಂ.ಅಹ್ಮದ್ ಸಂಸ್ಮರಣೆ ಮತ್ತು ಕೆ.ಎಂ ಅಹಮ್ಮದ್ ಸ್ಮಾರಕ ಮಾಧ್ಯಮ ಪ್ರಶಸ್ತಿ ವಿತರಣಾ ಸಮಾರಂಭ ಪ್ರೆಸ್ ಕ್ಲಬ್ ಸಭಾಂಗಣದಲ್ಲಿ ಜರುಗಿತು. ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಸಾಬು ಅಬ್ರಹಾಂ ಉದ್ಘಾಟಿಸಿದರು. ಪ್ರೆಸ್ ಕ್ಲಬ್ ವತಿಯಿಂದ ಅತ್ಯುತ್ತಮ ಗ್ರಾಮೀಣ ವರದಿಗಾರಿಕೆಗಾಗಿ ಆಯ್ಕೆಮಾಡಲಾದ ಮಾತೃಭೂಮಿ ಕಣ್ಣೂರು ಬ್ಯೂರೋದ ಹಿರಿಯ ವರದಿಗಾರ ಎ.ಕೆ ಶ್ರೀಜಿತ್ ಅವರಿಗೆ ಕೆ.ಎಂ.ಅಹಮದ್ ಸ್ಮಾರಕ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.
ಪ್ರೆಸ್ ಕ್ಲಬ್ ಅಧ್ಯಕ್ಷ ಸಿಜು ಕಣ್ಣನ್ ಅಧ್ಯಕ್ಷತೆ ವಹಿಸಿದ್ದರು. ಪ್ರೆಸ್ ಕ್ಲಬ್ ಮಾಜಿ ಅಧ್ಯಕ್ಷ ಟಿ.ಎ.ಶಾಫಿ ಸಂಸ್ಮರಣಾ ಉಪನ್ಯಾಸ ನೀಡಿದರು. ಮುಜೀಬ್ ಅಹಮ್ಮದ್, ಕೆ.ವಿ. ಪದ್ಮೇಶ್, ಪ್ರೆಸ್‍ಕ್ಲಬ್ ನಿಕಟಪೂರ್ವ ಅಧ್ಯಕ್ಷ ಮುಹಮ್ಮದ್ ಹಾಶಿಂ ಉಪಸ್ಥಿತರಿದ್ದರು. ಪ್ರಶಸ್ತಿ ವಿಜೇತ ಎ.ಕೆ. ಶ್ರೀಜಿತ್ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಕಾರ್ಯದರ್ಶಿ ಪ್ರದೀಪ್ ನಾರಾಯಣನ್ ಸ್ವಾಗತಿಸಿದರು. ಉಪಾಧ್ಯಕ್ಷ ಅಬ್ದುಲ್ಲಕುಞÂ ಉದುಮ ವಂದಿಸಿದರು.


