ಕಾಸರಗೋಡು: ದೇಶದ ಗಣತಂತ್ರ ವ್ಯವಸ್ಥೆ ವಿಶ್ವಕ್ಕೆ ಮಾದರಿಯಾಗಿರುವುದಾಗಿ ರಾಜ್ಯ ಅರಣ್ಯ ಮತ್ತು ವನ್ಯಜೀವಿ ಖಾತೆ ಸಚಿವ ಎ.ಕೆ ಶಶೀಂದ್ರನ್ ತಿಳಿಸಿದ್ದಾರೆ. ಅವರು ಕಾಸರಗೋಡು ನಗರಸಭಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ 77ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಸಪ್ತಭಾಷಾ ಸಂಗಮ ಭೂಮಿಯಾಗಿರುವ ಕಾಸರಗೋಡಿನ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದ್ದು, ವಿವಿಧ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸುವ ಮೂಲಕ ಹಿಂದುಳಿದ ಜಿಲ್ಲೆ ಎಂಬ ಹಣೆಪಟ್ಟಿಯನ್ನು ಹೋಗಲಾಡಿಸಲು ಸರ್ಕಾರ ಅವಿರತ ಶ್ರಮಿಸುತ್ತಿರುವುದಾಗಿ ತಿಳಿಸಿದರು.
ಶಾಸಕರಾದ ಎನ್.ಎ.ನೆಲ್ಲಿಕುನ್ನು ಇ.ಚಂದ್ರಶೇಖರನ್, ಸಿ.ಎಚ್. ಕುಞಂಬು, ಎ.ಕೆ.ಎಂ. ಅಶ್ರಫ್, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಸಾಬು ಅಬ್ರಹಾಂ, ಉಪಾಧ್ಯಕ್ಷೆ ಕೆ.ಕೆ. ಸೋಯಾ ಕಾಸರಗೋಡು ನಗರಸಭಾ ಅಧ್ಯಕ್ಷೆ ಶಾಹಿನಾ ಸಲೀಂ, ಕಾಸರಗೋಡು ಬ್ಲಾಕ್ ಪಂಚಾಯತ್ ಅಧ್ಯಕ್ಷ ಅಬ್ದುಲ್ಲ ಕುಞÂ ಚೆರ್ಕಳ, ಇತರೆ ಜನಪ್ರತಿನಿಧಿಗಳು ಭಾಗವಹಿಸಿದ್ದರು.
ವಿವಿಧ ತುಕಡಿಗಳಿಂದ ಆಕರ್ಷಕ ಪಥಸಂಚಲನ ನಡೆಯಿತು. ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್ ಪಡೆ, ಸ್ಥಳೀಯ ಪೆÇಲೀಸ್, ಮಹಿಳಾ ಪೆÇಲೀಸ್, ಅಬಕಾರಿ, ಹಿರಿಯ ವಿಭಾಗ ಸರ್ಕಾರಿ ಕಾಲೇಜು ಎನ್‍ಸಿಸಿ, ಕಾಸರಗೋಡು ಹಿರಿಯ ವಿಭಾಗ ಎನ್‍ಸಿಸಿ, ನೆಹರು ಕಲಾ ಮತ್ತು ವಿಜ್ಞಾನ ಕಾಲೇಜು ಕಾಞಂಗಾಡ್ ಎನ್‍ಸಿಸಿ ಕಾಞಂಗಾಡ್ ದುರ್ಗಾ ಹೈಯರ್ ಸೆಕೆಂಡರಿ ಶಾಲೆ ಎನ್‍ಸಿಸಿ, ನೀಲೇಶ್ವರಂ ರಾಜಾಸ್‍ಹೈಯರ್ ಸೆಕೆಂಡರಿ ಶಾಲೆ ಎನ್‍ಸಿಸಿ, ಚೆಮ್ನಾಡ್ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆ ಎನ್‍ಸಿಸಿ, ಕರಡುಕ ಸರ್ಕಾರಿ ವೃತ್ತಿಪರ ಹೈಯರ್ ಸೆಕೆಂಡರಿ ಶಾಲೆ ಎನ್‍ಸಿಸಿ, ನವಜೀವನ ಹೈಯರ್ ಸೆಕೆಂಡರಿಯ ವಿದ್ಯಾರ್ಥಿ ಪೊಲೀಸ್(ಎಸ್‍ಪಿಸಿ) ಸೇರಿದಂತೆ ವಿವಿಧ ತುಕಡಿಗಳು ಪಥಸಂಚಲನದಲ್ಲಿ ಪಾಲ್ಗೊಮಡಿತ್ತು. ಕಾರ್ಯಕ್ರಮದ ಅಂಗವಾಗಿ ಸಾಂಸ್ಕøತಿಕ ವೈವಿಧ್ಯ ನಡೆಯಿತು.



