ಮುಳ್ಳೇರಿಯ: ಆದೂರು ಪೊಲೀಸ್ ಠಾಣೆ ವ್ಯಾಪ್ತಿಯ ಆದೂರು ಮಂಡೆಬೆಟ್ಟಿ ನಿವಾಸಿ ನಾರಾಯಣ ಎಂಬವರ ಪುತ್ರ ರಮೇಶ(22)ನಾಪತ್ತೆಯಾಗಿರುವ ಬಗ್ಗೆ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ. 2025 ಜ. 23ರಂದು ಮಹಾರಾಷ್ಟ್ರಕ್ಕೆ ಕೆಲಸಕ್ಕಾಗಿ ತೆರಳುವ ಬಗ್ಗೆ ಮನೆಯವರಲ್ಲಿ ತಿಳಿಸಿ ಹೋಗಿದ್ದ ಇವರು ವಾಪಸಾಗಿಲ್ಲ ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.

