ಬದಿಯಡ್ಕ: ಜೀಣೋದ್ಧಾರಗೊಳ್ಳುತ್ತಿರುವ ಪೆರಡಾಲ ಶ್ರೀ ಉದನೇಶ್ವರ ದೇವಸ್ಥಾನಕ್ಕೆ ಭಾನುವಾರ ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ರಿಜಿಸ್ಟ್ರಾರ್ ಪ್ರೊ.ನವೀನ್ ಕುಮಾರ್ ಎಸ್.ಕೆ. ಭೇಟಿ ನೀಡಿ ಶ್ರೀ ದೇವರ ಅನುಗ್ರಹ ಪಡೆದು ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭ ಶ್ರೀಕ್ಷೇತ್ರದ ಜೀರ್ಣೋದ್ಧಾರ ಕಾರ್ಯಗಳನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಕೊನೆಯ ಹಂತ ಜೀರ್ಣೋದ್ಧಾರ ಕಾರ್ಯಗಳಿಗೆ ಮತ್ತು ಬ್ರಹ್ಮಕಲಶೋತ್ಸವಕ್ಕೆ ಸಹಕರಿಸುವುದಾಗಿ ಭರವಸೆ ನೀಡಿದರು. ಕೃಷ್ಣಮೂರ್ತಿ ಪುದುಕೋಳಿ, ಜೀಣೋದ್ದಾರ, ಬ್ರಹ್ಮಕಲಶೋತ್ಸವ ಸಮಿತಿ ಪದಾಧಿಕಾರಿಗಳು, ದೇವಾಲಯದ ಸಿಬ್ಬಂದಿಗಳು ಉಪಸ್ಥಿತರಿದ್ದರು.


