HEALTH TIPS

ಹೊಸ ಪಕ್ಷ ಕಟ್ಟಲು ಮುಂದಾದ ಕೆ.ಕವಿತಾ: ಚುನಾವಣಾ ಚಾಣಕ್ಯ ಪ್ರಶಾಂತ್ ಜತೆ ಚರ್ಚೆ

ಹೈದರಾಬಾದ್: ಬಿಆರ್‌ಎಸ್ ಪಕ್ಷದ ಅಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರ ಪುತ್ರಿ ಕೆ.ಕವಿತಾ ಅವರು ಹೊಸ ಪಕ್ಷ ಕಟ್ಟಲು ಮುಂದಾಗಿದ್ದು, ಈ ಕುರಿತು ಚುನಾವಣಾ ಚಾಣಕ್ಯ ಪ್ರಶಾಂತ್ ಕಿಶೋರ್ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇದೀಗ ತೆಲಂಗಾಣ ಜಾಗೃತಿ ಸಂಘಟನೆಯ ಅಧ್ಯಕ್ಷೆಯಾಗಿ ಕಾರ್ಯನಿರ್ವಹಿಸುತ್ತಿರುವ ಅವರು, ಬಲಿಷ್ಠ ಪಕ್ಷ ಕಟ್ಟಿ ಆ ಮೂಲಕ ಚುನಾವಣಾ ಅಖಾಡಕ್ಕೆ ಮತ್ತೆ ಧುಮುಕಲು ಮುಂದಾಗಿದ್ದಾರೆ.

ಇತ್ತೀಚೆಗೆ ಹೈದರಾಬಾದ್‌ನಲ್ಲಿ ಕಿಶೋರ್ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ. ರಾಜಕೀಯ ಪಕ್ಷ ಸ್ಥಾಪನೆ, ಕಾರ್ಯತಂತ್ರ, ಪರಿಣಾಮಕಾರಿಯಾಗಿ ಪಕ್ಷ ಸಂಘಟನೆ ಕುರಿತಂತೆ ಕಿಶೋರ್ ಜತೆ ಕವಿತಾ ಮಾತನಾಡಿದ್ದಾರೆ. ಈ ಬಗ್ಗೆ ಸಲಹೆಗಳನ್ನು ಪಡೆದಿದ್ದಾರೆ ಎಂದು ತೆಲಂಗಾಣ ಜಾಗೃತಿ ಮೂಲಗಳು ತಿಳಿಸಿವೆ.

ಕವಿತಾ ಅವರನ್ನು ಸೆಪ್ಟೆಂಬರ್ 2025ರಲ್ಲಿ ಪಕ್ಷದಿಂದ ಅಮಾನತುಗೊಳಿಸಲಾಯಿತು.

ಬಿಆರ್‌ಎಸ್‌ ಆಡಳಿತದ ಅವಧಿಯಲ್ಲಿ ಸಹೋದರ ಸಂಬಂಧಿಗಳು ಭ್ರಷ್ಟಾಚಾರದಲ್ಲಿ ಭಾಗಿಯಾಗಿದ್ದಾರೆ. ಈ ಮೂಲಕ ತಂದೆಯ ವರ್ಚಸ್ಸಿಗೆ ಕಳಂಕ ತಂದಿದ್ದಾರೆ ಎಂದು ಕವಿತಾ ಆರೋಪಿಸಿದ್ದರು.

'ಒಂದು ದಿನ ನಾನೂ ಮುಖ್ಯಮಂತ್ರಿಯಾಗುತ್ತೇನೆ. ಬಿಆರ್‌ಎಸ್ ಮತ್ತು ಆಡಳಿತಾರೂಢ ಕಾಂಗ್ರೆಸ್‌ ಪಕ್ಷದ ಭ್ರಷ್ಟಾಚಾರ ಮತ್ತು ಅಕ್ರಮಗಳನ್ನು ಹೊರಗೆಳೆಯುತ್ತೇನೆ' ಎಂದು ಇತ್ತೀಚೆಗೆ ಕವಿತಾ ಹೇಳಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries