ಬದಿಯಡ್ಕ: ತೃಶ್ಯೂರಿನ ಕಿಲ ಸ್ವರಾಜ್ ಆಡಿಟೋರಿಯಂನಲ್ಲಿ ಶನಿವಾರ ರಾಜ್ಯದ ಗ್ರಾಮ ಪಂಚಾಯಿತಿ ಅಧ್ಯಕ್ಷರ ಮುಖಾಮುಖಿ ಸಂವಾದ ಕಾರ್ಯಕ್ರಮದಲ್ಲಿ ಬದಿಯಡ್ಕ ಗ್ರಾಮಪಂಚಾಯಿತಿ ಅಧ್ಯಕ್ಷ ಡಿ.ಶಂಕರ, ಬೆಳ್ಳೂರು ಗ್ರಾಮಪಂಚಾಯಿತಿ ಅಧ್ಯಕ್ಷೆ ಮಾಲಿನಿ, ಕಾರಡ್ಕ ಪಂಚಾಯಿತಿ ಅಧ್ಯಕ್ಷೆ ಜನನಿ, ಕುಂಬ್ಡಾಜೆ ಪಂಚಾಯಿತಿ ಅಧ್ಯಕ್ಷೆ ಯಶೋಧ ಬಿ., ಚೆಂಗಳ ಗ್ರಾಮಪಂಚಾಯಿತಿ ಅಧ್ಯಕ್ಷ ವಸಂತ ಅಜಕ್ಕೋಡು ಸಹಿತ ಜಿಲ್ಲೆಯ ವಿವಿಧ ಗ್ರಾಮಪಂಚಾಯಿತಿ ಅಧ್ಯಕ್ಷರು ಪಾಲ್ಗೊಂಡಿದ್ದರು.


