HEALTH TIPS

'ಜನ ನಾಯಗನ್' ಸೆನ್ಸಾರ್ ಪ್ರಮಾಣಪತ್ರಕ್ಕೆ ತಡೆ: ಸುಪ್ರೀಂ ಮೆಟ್ಟಿಲೇರಿದ ‌ನಿರ್ಮಾಪಕ

ನವದೆಹಲಿ: ನಟ ವಿಜಯ್ ಅಭಿನಯದ 'ಜನ ನಾಯಗನ್' ಸಿನಿಮಾಕ್ಕೆ ಸೆನ್ಸಾರ್‌ ಪ್ರಮಾಣಪತ್ರ ನೀಡುವಂತೆ ನಿರ್ದೇಶಿಸಿ ಏಕಸದಸ್ಯ ಪೀಠ ನೀಡಿದ್ದ ಆದೇಶಕ್ಕೆ ತಡೆ ನೀಡಿರುವ ಮದ್ರಾಸ್‌ ಹೈಕೋರ್ಟ್‌ನ ಮಧ್ಯಂತರ ಆದೇಶವನ್ನು ಪ್ರಶ್ನಿಸಿ ಸಿನಿಮಾ ನಿರ್ಮಾಣ ಸಂಸ್ಥೆ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದೆ.

'ಜನ ನಾಯಗನ್' ಸಿನಿಮಾಕ್ಕೆ ತಕ್ಷಣ ಸೆನ್ಸಾರ್‌ ಪ್ರಮಾಣಪ‍ತ್ರ ನೀಡಬೇಕು ಎಂದು ಚಲನಚಿತ್ರ ಪ್ರಮಾಣೀಕರಣ ಮಂಡಳಿಗೆ(ಸಿಬಿಎಫ್‌ಸಿ) ಏಕಸದಸ್ಯ ಪೀಠ ನಿರ್ದೇಶನ ನೀಡಿತ್ತು. ಈ ಆದೇಶಕ್ಕೆ ಮದ್ರಾಸ್‌ ಹೈಕೋರ್ಟ್‌ ಜನವರಿ 9ರಂದು ತಡೆ ನೀಡಿತ್ತು.

ಈ ಆದೇಶವನ್ನು ಪ್ರಶ್ನಿಸಿ ಕೆವಿಎನ್ ಪ್ರೊಡಕ್ಷನ್ಸ್‌ ಎಲ್‌ಎಲ್‌ಪಿ ಸಂಸ್ಥೆ ಸುಪ್ರೀಂ ಕೋರ್ಟ್‌ಗೆ ಸೋಮವಾರ ಮೇಲ್ಮನವಿ ಸಲ್ಲಿಸಿದೆ.

ಸಿನಿಮಾ ಬಿಡುಗಡೆಗೆ ಜನವರಿ 9ರಂದು ದಿನ ನಿಗದಿಯಾಗಿತ್ತು. ಆದರೆ ಪ್ರಮಾಣಪತ್ರ ಸಿಗದ ಕಾರಣ ಸಿನಿಮಾ ಬಿಡುಗಡೆ ವಿಳಂಬಗೊಂಡಿದೆ. ರಾಜಕೀಯ ಪ್ರವೇಶಿಸಿರುವ ವಿಜಯ್‌ ಅವರ ಕೊನೆಯ ಸಿನಿಮಾ ಎಂದು ಹೇಳಲಾಗುತ್ತಿರುವ ಕಾರಣ ಈ ಸಿನಿಮಾ ಅಭಿಮಾನಿಗಳಲ್ಲಿ ಭಾರಿ ನಿರೀಕ್ಷೆ ಮೂಡಿಸಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries