ಜೆರುಸಲೇಂ: ಇಸ್ರೇಲ್‌ನಲ್ಲಿ ಉದ್ವಿಗ್ನ ಪರಿಸ್ಥಿತಿ ಉಲ್ಬಣಗೊಂಡಿರುವುದರಿಂದ ಭಾರತೀಯ ನಾಗರಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಮತ್ತು ಅನಗತ್ಯ ಪ್ರಯಾಣ ಕೈಬಿಡುವಂತೆ ಭಾರತದ ರಾಯಭಾರ ಕಚೇರಿ ಸಲಹೆ ನೀಡಿದೆ.
ಅಮೆರಿಕ ಮತ್ತು ಬ್ರಿಟನ್ ರಾಯಭಾರ ಕಚೇರಿಗಳು ಕೂಡ ತಮ್ಮ ದೇಶದ ನಾಗರಿಕರಿಗೆ ಸುರಕ್ಷಿತವಾಗಿರುವಂತೆ ಸಲಹೆ ನೀಡಿವೆ.
ಇಸ್ರೇಲ್‌ನಲ್ಲಿ ನೆಲಸಿರುವ ನಾಗರಿಕರು ಅಲ್ಲಿನ ಅಧಿಕಾರಿಗಳು ಹೊರಡಿಸಿರುವ ಸುರಕ್ಷತಾ ಮಾರ್ಗಸೂಚಿಗಳು ಮತ್ತು ಶಿಷ್ಟಾಚಾರಗಳನ್ನು ಪಾಲಿಸಬೇಕು ಮತ್ತು ಭಾರತೀಯರು ಇಸ್ರೇಲ್‌ಗೆ ಅನಗತ್ಯ ಪ್ರಯಾಣವನ್ನು ತಪ್ಪಿಸಬೇಕು ಎಂದು ಭಾರತದ ರಾಯಭಾರ ಕಚೇರಿ ತಿಳಿಸಿದೆ.
ತುರ್ತು ಸಹಾಯಕ್ಕಾಗಿ ಭಾರತೀಯ ರಾಯಭಾರ ಕಚೇರಿಯ ಸಹಾಯವಾಣಿ +972-54-7520711, +972-54-3278392 ಗೆ ಸಂಪರ್ಕಿಸಬಹುದು ಎಂದು ಸಾಮಾಜಿಕ ಜಾಲತಾಣಗಳು ಮತ್ತು ಅಧಿಕೃತ ವೆಬ್‌ಸೈಟ್‌ನಲ್ಲಿ ತಿಳಿಸಿದೆ.

