HEALTH TIPS

ಪಾಕಿಸ್ತಾನದ ಸಿಂಧ್‌ ಪ್ರಾಂತ್ಯದಲ್ಲಿ ಹಿಂದೂ ರೈತನ ಗುಂಡಿಕ್ಕಿ ಹತ್ಯೆ

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಭೂ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ. ಘಟನೆ ಖಂಡಿಸಿ ಹಿಂದೂ ಸಮುದಾಯದವರು ಪ್ರತಿಭಟನೆ ನಡೆಸುತ್ತಿದ್ದಾರೆ.ಕೆಲೇಶ್ ಕೊಹ್ಲಿ ಮೃತ ರೈತ.

ಶನಿವಾರ ರಾತ್ರಿ ಹೈದರಾಬಾದ್‌ನಲ್ಲಿ ಭೂಮಾಲೀಕ ಸರ್ಫರಾಜ್ ನಿಜಾಮಾನಿ ಮತ್ತು ಅವರ ಸಹಾಯಕ ಜಫರುಲ್ಲಾ ಖಾನ್ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಜನವರಿ 4ರಂದು ಸಿಂಧ್‌ ಪ್ರಾಂತ್ಯದ ಬದಿನ್‌ ಜಿಲ್ಲೆಯ ತಲ್ಹಾರ್ ಗ್ರಾಮದಲ್ಲಿ ನಿಜಾಮಾನಿ ಒಡೆತನದ ಭೂಮಿಯಲ್ಲಿ ಆಶ್ರಯ ತಾಣ ನಿರ್ಮಿಸುತ್ತಿದ್ದ ಆರೋಪದ ಮೇಲೆ ಕೆಲೇಶ್ ಕೊಹ್ಲಿ ಮೇಲೆ ಗುಂಡು ಹಾರಿಸಲಾಗಿದೆ ಎಂದು ಪೊಲೀಸರು ವಿವರಿಸಿದ್ದಾರೆ.

ಘಟನೆ ಬೆನ್ನಲ್ಲೇ ಆರೋಪಿಗಳು ತಲೆಮರೆಸಿಕೊಂಡಿದ್ದರು. ಕೆಲೇಶ್ ಕೊಹ್ಲಿ ಸಹೋದರ ಕುಮಾರ್ ಕೊಹ್ಲಿ ದಾಖಲಿಸಿದ್ದ ದೂರು ಆಧರಿಸಿ ಹೈದರಾಬಾದ್‌ನ ಫತೇ ಚೌಕ್ ಪ್ರದೇಶದಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದೂ ಅವರು ತಿಳಿಸಿದ್ದಾರೆ.

ನೆರೆಯ ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂ ಸಮುದಾಯದವರ ಮೇಲೆ ನಿರಂತರವಾಗಿ ನಡೆಯುತ್ತಿರುವ ‌‌ದಾಳಿಗಳ ಬಗ್ಗೆ ತೀವ್ರ ಕಳವಳ ವ್ಯಕ್ತವಾಗಿರುವ ಬೆನ್ನಲ್ಲೇ ಪಾಕ್‌ನಲ್ಲಿ ಹಿಂದೂ ವ್ಯಕ್ತಿಯ ಹತ್ಯೆಯಾಗಿರುವುದು ಆಕ್ರೋಶಕ್ಕೆ ಕಾರಣವಾಗಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries