ಗಾಝಾ: ಭಾನುವಾರ ಉತ್ತರ ಮತ್ತು ದಕ್ಷಿಣ ಗಾಝಾಪಟ್ಟಿಯಲ್ಲಿ ಇಸ್ರೇಲ್‍ನ ವೈಮಾನಿಕ ದಾಳಿಯಲ್ಲಿ ಕನಿಷ್ಠ 10 ಫೆಲೆಸ್ತೀನೀಯರು ಮೃತಪಟ್ಟಿರುವುದಾಗಿ ಗಾಝಾದ ಆರೋಗ್ಯ ಅಧಿಕಾರಿಗಳು ಹೇಳಿದ್ದಾರೆ.
ಸ್ಥಳಾಂತರಗೊಂಡ ಕುಟುಂಬಗಳು ವಾಸಿಸುವ ಟೆಂಟ್ ಶಿಬಿರದ ಮೇಲೆ ಇಸ್ರೇಲ್‍ನ ವೈಮಾನಿಕ ದಾಳಿಯಲ್ಲಿ ಕನಿಷ್ಠ 4 ಜನರು ಮೃತಪಟ್ಟರೆ, ದಕ್ಷಿಣ ಗಾಝಾಪಟ್ಟಿಯ ಖಾನ್ ಯೂನಿಸ್ ನಗರದಲ್ಲಿ ನಡೆದ ಮತ್ತೊಂದು ದಾಳಿಯಲ್ಲಿ ಐವರು, ಗಾಝಾ ಪಟ್ಟಿಯ ಉತ್ತರದಲ್ಲಿ ನಡೆಸಿದ ಗುಂಡಿನ ದಾಳಿಯಲ್ಲಿ ಒಬ್ಬ ಮೃತಪಟ್ಟಿರುವುದಾಗಿ ವರದಿಯಾಗಿದೆ.
ಶನಿವಾರ ಬೀಟ್ ಹನೌನ್ ನಗರದಲ್ಲಿ ಸುರಂಗವೊಂದರಿಂದ ಹೊರಬಂದ `ಹಮಾಸ್ ಸಶಸ್ತ್ರದಾರಿಗಳು' ಇಸ್ರೇಲ್ ಪಡೆಗಳ ಮೇಲೆ ದಾಳಿ ನಡೆಸಿರುವುದಕ್ಕೆ ಪ್ರತಿಯಾಗಿ ಈ ನಿಖರ ಮತ್ತು ಯಶಸ್ವಿ ಕಾರ್ಯಾಚರಣೆ ನಡೆಸಿರುವುದಾಗಿ ಇಸ್ರೇಲ್ ಮಿಲಿಟರಿ ಅಧಿಕಾರಿಗಳು ಹೇಳಿದ್ದಾರೆ.

