ಮಂಜೇಶ್ವರ: ಇತಿಹಾಸ ಪ್ರಸಿದ್ದ ಚಿಗುರುಪಾದೆ ಶ್ರೀಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ ಫೆ.11 ಬುಧವಾರ ವಿವಿಧ ವೈದಿಕ, ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಬ್ರಹ್ಮಶ್ರೀ ವರ್ಕಾಡಿ ದಿನೇಶಕೃಷ್ಣ ತಂತ್ರಿಗಳ ನೇತೃತ್ವದಲ್ಲಿ ಜರಗಲಿದೆ.
ಬೆಳಿಗ್ಗೆ 7 ರಿಂದ ಉಷಃಕಾಲ ಪೂಜೆ, ಗಣಹೋಮ, ನವಕ ಕಲಶಾಭಿಷೇಕ, ಏಕಾದಶ ರುದ್ರಾಭಿಷೇಕ, 9.30 ರಿಂದ ಶ್ರೀಮಹಾಲಿಂಗೇಶ್ವರ ಭಜನಾ ಸಂಘ ಚಿಗುರುಪಾದೆ ತಂಡದ ಉದ್ಘಾಟನೆ ಹಾಗೂ ಭಜನಾ ಕಾರ್ಯಕ್ರಮ ಜರಗಲಿದೆ.
ಪೂರ್ವಾಹ್ನ 11 ರಿಂದ ಕರ್ನಾಟಕ ರಾಜ್ಯ ಪ್ರಶಸ್ತಿ ಪುರಸ್ಕøತ ಶಿಕ್ಷಕ ಜಗದೀಶ ಶೆಟ್ಟಿ ಎಲಿಯಾಣ ಅವರಿಗೆ ಕ್ಷೇತ್ರದ ವತಿಯಿಂದ ಅಭಿನಂದನಾ ಕಾರ್ಯಕ್ರಮ ಹಾಗೂ ಕ್ಷೇತ್ರ ಮೇಲ್ವಿಚಾರಕ ಗಣಪತಿ ಭಟ್ ಅಮ್ಮೆನಡ್ಕ ಅವರಿಗೆ ಗೌರವಾರ್ಪಣೆ ಜರಗಲಿದೆ. ಸಮಾರಂಭದಲ್ಲಿ ಬ್ರಹ್ಮಶ್ರೀ ದಿನೇಶಕೃಷ್ಣ ತಂತ್ರಿ ವರ್ಕಾಡಿ ಗೌರವ ಉಪಸ್ಥಿತಿ ಇರಲಿದ್ದು, ಶ್ರೀಮಹಾಲಿಂಗೇಶ್ವರ ಸೇವಾ ಟ್ರಸ್ಟ್ ಅಧ್ಯಕ್ಷ ಡಾ.ಜಯಪ್ರಕಾಶನಾರಾಯಣ ತೊಟ್ಟೆತ್ತೋಡಿ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಉಡುಪಿ ಜಿಲ್ಲಾ ಕರ್ನಾಟಕ ಸಾಹಿತ್ಯಪರಿಷತ್ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಭಾಗವಹಿಸುವರು. ಕ್ಷೇತ ್ರಆಡಳಿತ ಮೊಕ್ತೇಸರ ವಸಂತ ಭಟ್ ತೊಟ್ಟೆತ್ತೋಡಿ, ಶ್ರೀಮಹಾಲಿಂಗೇಶ್ವರ ಸೇವಾ ಸಮಿತಿ ಅಧ್ಯಕ್ಷ ಸತೀಶ್ಚಂದ್ರರೈ ಉಪಸ್ಥಿತರಿರುವರು.
ಮಧ್ಯಾಹ್ನ 12 ರಿಂದ ಮಹಾಪೂಜೆ, ಶ್ರೀದೇವರ ಬಲಿ, ಪ್ರಸಾದ ವಿತರಣೆ, ಅನ್ನ ಸಂತರ್ಪಣೆ ಜರಗಲಿದೆ. ಸಂಜೆ 6 ರಿಂದಪುಷ್ಪಾ ಶೆಟ್ಟಿಗಾರ್ ಬೇರಿಕೆ ಅವರ ನೇತೃತ್ವದಲ್ಲಿ ಶ್ರೀಮಹಾಲಿಂಗೇಶ್ವರ ನೃತ್ಯ ತಂಡ ಚಿಗುರುಪಾದೆ ಸದಸ್ಯರಿಂದ ನೃತ್ಯ ವೈವಿಧ್ಯ ಜರಗಲಿದೆ. ರಾತ್ರಿ 7ಕ್ಕೆ ರಂಗಪೂಜೆ, 8 ರಿಂದ ಭೂತಬಲಿ ಉತ್ಸವ, ದರ್ಶನಬಲಿ ಉತ್ಸವ, ಬಟ್ಟಲು ಕಾಣಿಕೆ, ರಾಜಾಂಗಣ ಪ್ರಸಾದ ಜರಗಲಿದೆ ಎಂದು ಕ್ಷೇತ್ರ ಪ್ರಕಟಣೆ ತಿಳಿಸಿದೆ.

.jpg)
