HEALTH TIPS

ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನ ಸೇನೆಯಿಂದ ವಾಯುದಾಳಿ| ಮಹಿಳೆಯರು, ಮಕ್ಕಳು ಸಹಿತ ಕನಿಷ್ಠ 12 ಮಂದಿ ಮೃತ್ಯು: ವರದಿ

ಕಾಬೂಲ್: ಪಾಕಿಸ್ತಾನ ಸೇನೆಯು ಅಫ್ಘಾನಿಸ್ತಾನದ ಮೇಲೆ ವಾಯುದಾಳಿಯನ್ನು ನಡೆಸಿದೆ. ಮಹಿಳೆಯರು, ಮಕ್ಕಳು ಸೇರಿದಂತೆ ಕನಿಷ್ಠ 12 ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು Aljazeera ವರದಿ ಮಾಡಿದೆ.

ಇಸ್ಲಾಮಾಬಾದ್‌ನ ಶಿಯಾ ಮಸೀದಿ ಮೇಲೆ ಇತ್ತೀಚೆಗೆ ನಡೆದ ಆತ್ಮಹತ್ಯಾ ಬಾಂಬ್ ದಾಳಿ ಸೇರಿದಂತೆ ಇತ್ತೀಚಿನ ದಾಳಿಗಳ ಹಿನ್ನೆಲೆ ಹಿಂದಿನ ಸಶಸ್ತ್ರ ಗುಂಪುಗಳ ಶಿಬಿರಗಳು ಮತ್ತು ಅಡಗುತಾಣಗಳನ್ನು ಗುರಿಯಾಗಿಸಿ ಪಾಕಿಸ್ತಾನ ಸೇನೆ ದಾಳಿ ನಡೆಸಿದೆ ಎಂದು ತಿಳಿದು ಬಂದಿದೆ.

ಅಫ್ಘಾನಿಸ್ತಾನದ ರಕ್ಷಣಾ ಸಚಿವಾಲಯ ರವಿವಾರ ಪಾಕಿಸ್ತಾನದ ದಾಳಿಯನ್ನು ಖಂಡಿಸಿದೆ. ಗಡಿ ಪ್ರದೇಶಗಳಾದ ನಂಗರ್ಹಾರ್ ಮತ್ತು ಪಕ್ತಿಕಾ ಪ್ರಾಂತ್ಯಗಳಲ್ಲಿ ಧಾರ್ಮಿಕ ಶಾಲೆ ಹಾಗೂ ಮನೆಗಳನ್ನು ಗುರಿಯಾಗಿಸಿ ದಾಳಿ ನಡೆಸಿದೆ ಎಂದು ಆರೋಪಿಸಿದೆ. ಈ ದಾಳಿಗಳ ಪರಿಣಾಮವಾಗಿ ಮಹಿಳೆಯರು ಮತ್ತು ಮಕ್ಕಳು ಸೇರಿ ಹಲವಾರು ಮಂದಿ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ.

"ದೇಶದ ಸೇನೆಯು ತೆಹ್ರಿಕ್-ಎ-ತಾಲಿಬಾನ್ ಪಾಕಿಸ್ತಾನ್ (TTP) ಗೆ ಸೇರಿದ ಏಳು ಶಿಬಿರಗಳು ಮತ್ತು ಅಡಗುತಾಣಗಳ ಮೇಲೆ "ಗುಪ್ತಚರ ಆಧಾರಿತ, ಆಯ್ದ ಕಾರ್ಯಾಚರಣೆಗಳನ್ನು ನಡೆಸಲಾಗಿದೆ" ಎಂದು ಪಾಕಿಸ್ತಾನದ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಎಕ್ಸ್‌ನಲ್ಲಿ ಮಾಡಿರುವ ಪೋಸ್ಟ್‌ನಲ್ಲಿ ತಿಳಿಸಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries