HEALTH TIPS

ಕಾಕಿನಾಡದ ಪಟಾಕಿ ಉತ್ಪಾದನಾ ಘಟಕದಲ್ಲಿ ಭಾರಿ ಸ್ಫೋಟ: ಕನಿಷ್ಠ 12 ಮೃತಪಟ್ಟಿರುವ ಶಂಕೆ

ಹೈದರಾಬಾದ್: ಆಂಧ್ರಪ್ರದೇಶದ ಕಾಕಿನಾಡ ಜಿಲ್ಲೆಯ ಸಮಲ್ ಕೋಟ್ ಮಂಡಲ್ ನ ವೆಟ್ಲಪಲೆಮ್ ಗ್ರಾಮದಲ್ಲಿರುವ ಪಟಾಕಿ ಉತ್ಪಾದನಾ ಘಟಕದಲ್ಲಿ ಶನಿವಾರ ಸಂಭವಿಸಿದ ಭಾರೀ ಸ್ಫೋಟದಲ್ಲಿ ಕನಿಷ್ಠ 12 ಮಂದಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಹಲವರು ಗಂಭೀರವಾಗಿ ಗಾಯಗೊಂಡಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಾರ್ಮಿಕರು ದೊಡ್ಡ ಪ್ರಮಾಣದಲ್ಲಿ ಪಟಾಕಿಗಳನ್ನು ತಯಾರಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಸ್ಫೋಟ ಸಂಭವಿಸಿದೆ. ಸ್ಫೋಟದ ತೀವ್ರತೆಗೆ ಕ್ಷಣಾರ್ಧದಲ್ಲಿ ಬೆಂಕಿ ಹೊತ್ತಿಕೊಂಡು, ಕಾರ್ಖಾನೆಯೊಳಗೆ ಇದ್ದ ಹಲವರು ಸಿಲುಕಿಕೊಂಡರು. ಘಟನೆ ನಡೆದಾಗ ಸುಮಾರು 20 ಕಾರ್ಮಿಕರು ಘಟಕದೊಳಗೆ ಕಾರ್ಯನಿರ್ವಹಿಸುತ್ತಿದ್ದರು ಎಂದು ತಿಳಿದುಬಂದಿದೆ.

ಸ್ಫೋಟದಿಂದ ಕಾರ್ಖಾನೆಯ ಒಂದು ಭಾಗ ಸಂಪೂರ್ಣ ಧ್ವಂಸಗೊಂಡಿದ್ದು, ಹತ್ತಿರದ ಕಟ್ಟಡಗಳಿಗೂ ಹಾನಿಯಾಗಿದೆ. ಸ್ಫೋಟದ ಆಘಾತದಿಂದ ಸುತ್ತಮುತ್ತಲಿನ ಪ್ರದೇಶದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದರು. ರಕ್ಷಣಾ ಕಾರ್ಯಾಚರಣೆಗಳು ಮುಂದುವರಿದಿದ್ದು, ಸ್ಥಳೀಯರೂ ನೆರವು ನೀಡುತ್ತಿದ್ದಾರೆ. ಗಾಯಾಳುಗಳನ್ನು ಆಂಬ್ಯುಲೆನ್ಸ್ಗಳ ಮೂಲಕ ಸಮೀಪದ ಆಸ್ಪತ್ರೆಗಳಿಗೆ ಸಾಗಿಸಲಾಗಿದೆ. ತೀವ್ರ ಸುಟ್ಟಗಾಯಗಳಾಗಿರುವ ಕೆಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಘಟನೆಯ ಕುರಿತು ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ, ಗಾಯಾಳುಗಳಿಗೆ ತಕ್ಷಣ ಚಿಕಿತ್ಸೆ ಒದಗಿಸುವಂತೆ ಹಾಗೂ ಮೃತರ ಕುಟುಂಬಗಳಿಗೆ ಅಗತ್ಯ ನೆರವು ನೀಡುವಂತೆ ಸೂಚನೆ ನೀಡಿದ್ದಾರೆ.

ಸ್ಫೋಟದ ಕಾರಣ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries