HEALTH TIPS

ಮೀಯಪದವು ವಿದ್ಯಾವರ್ಧಕ ಶಾಲೆಯಲ್ಲಿ ಫೆ. 13 ರಂದು ವಾರ್ಷಿಕೋತ್ಸವ ಸಂಭ್ರಮ

ಮಂಜೇಶ್ವರ: ಮೀಯಪದವು ವಿದ್ಯಾವರ್ಧಕ ಪ್ರೌಢ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಸಮಾರಂಭ ಫೆ. 13ರ ಶುಕ್ರವಾರ ಶಾಲಾ ರಾಮಕೃಷ್ಣ ರಾವ್ ಸಭಾಂಗಣದಲ್ಲಿ ನಡೆಯಲಿದೆ.

ಬೆಳಿಗ್ಗೆ 9.30ಕ್ಕೆ ಶಾಲಾ ಸಂಚಾಲಕಿ ಎಂ. ರಾಜೇಶ್ವರಿ ಎಸ್.ರಾವ್ ಧ್ವಜಾರೋಹಣ ನೆರವೇರಿಸುವರು. ಬೆಳಿಗ್ಗೆ 10 ರಿಂದ ಶಾಲಾ ವಿದ್ಯಾರ್ಥಿಗಳಿಂದ ವೈವಿಧ್ಯಮಯ ಸಾಂಸ್ಕøತಿಕ ಕಾರ್ಯಕ್ರಮಗಳು ಜರಗಲಿವೆ. ಮಧ್ಯಾಹ್ನ 2.ಕ್ಕೆ ನಡೆಯಲಿರುವ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಜೇಶ್ವರ ಉಪಜಿಲ್ಲಾ ಶಿಕ್ಷಣಾಧಿಕಾರಿ ಜೋರ್ಜ್ ಕ್ರಾಸ್ತಾ ಸಿ.ಎಚ್. ವಹಿಸುವರು. ಮುಖ್ಯ ಅತಿಥಿಗಳಾಗಿ ಮಂಗಳೂರು ಸಂತ ಅಲೋಶಿಯಸ್ ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಹಾಗೂ ವಿಜ್ಞಾನ ವಿಭಾಗದ ನಿರ್ದೇಶಕ ಡಾ. ನಾರಾಯಣ ಭಟ್ ಮರುವಳ ಮತ್ತು ಬಿ.ಆರ್.ಸಿ ಯೋಜನಾಧಿಕಾರಿ ರಾಜಗೋಪಾಲ್ ಪಿ. ಉಪಸ್ಥಿತರಿರುವರು. ನಿವೃತ್ತ ಅಧ್ಯಾಪಕ ಜೋಕಿ ಮೊಂತೆರೋ ಅವರಿಗೆ ಗೌರವಾರ್ಪಣೆ ಸಲ್ಲಿಸಲಾಗುವುದು. ಇದೇ ವೇಳೆ, ರಾಜ್ಯ ಮಟ್ಟದ ಕಲೋತ್ಸವದಲ್ಲಿ ಹಿಂದಿ ಕವಿತಾ ರಚನೆಯಲ್ಲಿ ಎ ಗ್ರೇಡ್ ಹಾಗೂ ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಎ ಗ್ರೇಡ್ ಪಡೆದ  ಶಾಲಾ ಹಳೆಯ ವಿದ್ಯಾರ್ಥಿನಿಯರಾದ ಕು. ಅನಘ ಎಸ್. ಮತ್ತು ಕು. ಫಾತಿಮತ್ ಶಿಫಾನ ಅವರನ್ನು ಅಭಿನಂದಿಸಲಾಗುವುದು. ಸಾಂಸ್ಕೃತಿಕ ಕಾರ್ಯಕ್ರಮದ ಭಾಗವಾಗಿ ಸಂಜೆ 4.ಕ್ಕೆ ಶಾಲಾ ವಿದ್ಯಾರ್ಥಿಗಳಿಂದ ತುಳು ಹಾಸ್ಯಮಯ ನಾಟಕ "ಸಿಬಿಐ ಸೇತುರಾಮ್ ಅಯ್ಯರ್" ಪ್ರದರ್ಶನಗೊಳ್ಳಲಿದೆ.

ಇದಕ್ಕೂ ಮುನ್ನ ಪೂರ್ವಭಾವಿಯಾಗಿ ಫೆ. 7 ರಂದು ವಾರ್ಷಿಕ ಕ್ರೀಡೋತ್ಸವ ಹಾಗೂ ಫೆ.12 ರಂದು ಛದ್ಮವೇಶ ಸ್ಪರ್ಧೆಗಳು ನಡೆಯಲಿವೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries