HEALTH TIPS

ಮೇಘಾಲಯದಲ್ಲಿ ಅಕ್ರಮ ಗಣಿಗಾರಿಕೆ: 17,000 ಮೆಟ್ರಿಕ್ ಟನ್ ಕಲ್ಲಿದ್ದಲು ವಶ

ಶಿಲ್ಲಾಂಗ್: ಮೇಘಾಲಯದ ಪೂರ್ವ ಜೈನ್ತಿಯಾ ಹಿಲ್ಸ್ ಜಿಲ್ಲೆಯಲ್ಲಿ ಕಲ್ಲಿದ್ದಲು ಅಕ್ರಮ ಗಣಿಗಾರಿಕೆ ಮತ್ತು ಸಾಗಣೆ ಜಾಲ ಭೇದಿಸಿರುವ ಪೊಲೀಸರು, 17,000 ಮೆಟ್ರಿಕ್ ಟನ್ ಕಲ್ಲಿದ್ದಲು ಮತ್ತು 25.5 ಕೆಜಿ ಸ್ಫೋಟಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಫೆಬ್ರುವರಿ 5ರಂದು ಥಾಂಗ್ಸ್ಕು ಪ್ರದೇಶದ ಅಕ್ರಮ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಸ್ಫೋಟದಲ್ಲಿ 34 ಜನರು ಮೃತಪಟ್ಟು, ಹಲವರು ಗಾಯಗೊಂಡ ನಂತರ ಈ ಕ್ರಮ ಕೈಗೊಳ್ಳಲಾಗಿದೆ. ಇದು ಅಕ್ರಮ ಗಣಿಗಾರಿಕೆ ಚಟುವಟಿಕೆಗಳ ವಿರುದ್ಧ ಕಠಿಣ ಕ್ರಮವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಫೆಬ್ರುವರಿ 20 ರ ರಾತ್ರಿ ಜಿಲ್ಲಾ ಪೊಲೀಸರು ದಾಳಿ ನಡೆಸಿ, 17,322 ಮೆಟ್ರಿಕ್ ಟನ್ ಅಕ್ರಮವಾಗಿ ಗಣಿಗಾರಿಕೆ ಮಾಡಿದ ಕಲ್ಲಿದ್ದಲು ಮತ್ತು ಸ್ಥಗಿತಗೊಂಡಿರುವ ಗಣಿಗಳಿಂದ 25.5 ಕೆಜಿ ಸ್ಫೋಟಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಪೂರ್ವ ಜೈನ್ತಿಯಾ ಹಿಲ್ಸ್ ಎಸ್ಪಿ ಪಂಕಜ್ ಕುಮಾರ್ ರಸ್ಗಾನಿಯಾ ಹೇಳಿದರು.

ಫೆಬ್ರುವರಿ 5ರಿಂದ ಅಕ್ರಮ ಗಣಿಗಾರಿಕೆ ಮತ್ತು ಸಾಗಣೆಗೆ ಸಂಬಂಧಿಸಿದಂತೆ 94 ಎಫ್‌ಐಆರ್‌ಗಳನ್ನು ದಾಖಲಿಸಲಾಗಿದ್ದು, 22 ಜನರನ್ನೂ ಬಂಧಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಸ್ಫೋಟದ ನಂತರ, ರಾಜ್ಯ ಸರ್ಕಾರವು ಘಟನೆಯ ತನಿಖೆಗಾಗಿ ವಿಶೇಷ ತನಿಖಾ ತಂಡವನ್ನು ರಚಿಸಿತ್ತು. ಮೇಘಾಲಯ ಹೈಕೋರ್ಟ್ ಸಹ ತನಿಖೆಯ ಮೇಲ್ವಿಚಾರಣೆ ನಡೆಸುತ್ತಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries