HEALTH TIPS

ಮುಂಬೈ: ಭಯೋತ್ಪಾದಕ ಚಟುವಟಿಕೆ ಶಂಕೆ; 20ಕ್ಕೂ ಹೆಚ್ಚು ಸ್ಥಳಗಳಲ್ಲಿ ಎಟಿಎಸ್‌ ಶೋಧ

ಮುಂಬೈ: ಭಯೋತ್ಪಾದಕ ಚಟುವಟಿಕೆಗಳು ನಡೆಯುತ್ತಿರುವ ಶಂಕೆಯಡಿ, ಯವತ್‌ಮಹಲ್ ಮತ್ತು ಅಹಿಲ್ಯಾನಗರ ಜಿಲ್ಲೆಗಳ 20ಕ್ಕೂ ಹೆಚ್ಚು ಸ್ಥಳಗಳಲ್ಲಿ ಮಹಾರಾಷ್ಟ್ರದ ಭಯೋತ್ಪಾದಕ ನಿಗ್ರಹ ದಳ ಶೋಧ ನಡೆಸಿದೆ.

12ಕ್ಕೂ ಹೆಚ್ಚು ಜನರನ್ನು ವಿಚಾರಣೆಗಾಗಿ ವಶಕ್ಕೆ ಪಡೆಯಲಾಗಿದೆ. ಯವತ್‌ಮಾಲ್‌ ಜಿಲ್ಲೆಯ 14 ಸ್ಥಳಗಳಲ್ಲಿ ಮತ್ತು ಅಹಿಲ್ಯಾನಗರ ಜಿಲ್ಲೆಯ ಏಳು ಸ್ಥಳಗಳಲ್ಲಿ ಶೋಧ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅನುಮಾನಾಸ್ಪದ ದಾಖಲೆಗಳು, ಮೊಬೈಲ್, ಎಲೆಕ್ಟ್ರಾನಿಕ್ ಸಾಧನಗಳು ಮತ್ತು ಸಿ.ಸಿ.ಟಿ.ವಿ.ಯನ್ನು ವಶಕ್ಕೆ ಪಡೆಯಲಾಗಿದೆ.

ಯುವಕರನ್ನು ಭಯೋತ್ಪಾದಕ ಕೃತ್ಯಕ್ಕೆ ಸೆಳೆಯುತ್ತಿರುವ ಬಗ್ಗೆ ಗುಪ್ತಚರ ವಿಭಾಗದ ನೀಡಿದ ಮಾಹಿತಿಯ ಆಧಾರದಲ್ಲಿ ತನಿಖೆ ನಡೆಸಲಾಗುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿ ಈವರೆಗೆ ಯಾರನ್ನು ಬಂಧಿಸಲಾಗಿಲ್ಲ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries