ಪೆರ್ಲ: ಹಿಂದೂ ಸಂಗಮ ಆಯೋಜನಾ ಸಮಿತಿ ಎಣ್ಮಕಜೆ ಪಂಚಾಯಿತಿ ಸಮಿತಿ ವತಿಯಿಂದ ಬೃಹತ್ ಹಿಂದೂ ಸಂಗಮ ಕಾರ್ಯಕ್ರಮ ಫೆ. 22ರಂದು ಪೆರ್ಲ ಪೇಟೆ ಆಸುಪಾಸು ಜರುಗಲಿದೆ. ಅಂದು ಮಧ್ಯಾಹ್ನ 2.30ಕ್ಕೆ ಇಡಿಯಡ್ಕ ಶ್ರೀ ದುರ್ಗಾಪರಮೇಶ್ವರೀ(ಉಳ್ಳಾಲ್ತಿ)ವಿಷ್ಣುಮೂರ್ತಿ ದೇವಸ್ಥಾನ ವಠಾರದಿಂದ ಪೆರ್ಲ ಪೇಟೆಗೆ ಸಾಂಸ್ಕøತಿಕ ಶೋಭಾಯಾತ್ರೆ ನಡೆಯುವುದು. 3.30ಕ್ಕೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಹಿಂದೂ ಐಕ್ಯವೇದಿ ಕಾರ್ಯಾಧ್ಯಕ್ಷ ವಲ್ಸನ್ ತಿಲ್ಲಂಗೇರಿ ದಿಕ್ಸೂಚಿ ಭಾಷಣ ಮಾಡಿದರು. ಒಡಿಯೂರು ಶ್ರೀ ಮಾತಾನಂದಮಯೀ ಆಶೀರ್ವಚನ ನೀಡುವರು. ಸಂಜೆ 6ಕ್ಕೆ ನಡೆಯುವ ಕಲರ್ಸ್ ಕನ್ನಡ ಖ್ಯಾತಿಯ, ಜಗದೀಶ್ ಆಚಾರ್ಯ ಪುತ್ತೂರು ಬಳಗದವರಿಂದ ಗಾನ ವೈಭವ ಕಾರ್ಯಕ್ರಮ ನಡೆಯುವುದು.

