HEALTH TIPS

ಮೇಘಾಲಯ | ಅಕ್ರಮ ಕಲ್ಲಿದ್ದಲು ಗಣಿಯಲ್ಲಿ ಸ್ಫೋಟ: ಸಾವಿನ ಸಂಖ್ಯೆ 25ಕ್ಕೆ ಏರಿಕೆ

ಶಿಲ್ಲಾಂಗ್: ಮೇಘಾಲಯದ ಪೂರ್ವ ಜೈಂಟಿಯಾ ಹಿಲ್ಸ್ ಜಿಲ್ಲೆಯಲ್ಲಿ ಅಕ್ರಮವಾಗಿ ನಡೆಸುತ್ತಿದ್ದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟವರ ಸಾವಿನ ಸಂಖ್ಯೆ 25ಕ್ಕೆ ಏರಿಕೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಜೈಂಟಿಯಾ ಹಿಲ್ಸ್‌ ಜಿಲ್ಲೆಯ ಥಾಂಗ್ಸ್ಕು ಪ್ರದೇಶದಲ್ಲಿ ಈ ಘಟನೆ ನಡೆದಿದೆ.

ಗುರುವಾರ ಸಂಭವಿಸಿದ ಸ್ಫೋಟದಲ್ಲಿ 18 ಜನರು ಮೃತಪಟ್ಟಿದ್ದರು. ಅನೇಕ ಕಾರ್ಮಿಕರು ಸಿಲುಕಿರುವ ಶಂಕೆ ವ್ಯಕ್ತಪಡಿಸಿದ್ದರು. ಇಂದು (ಶುಕ್ರವಾರ) ಕೆಲವರ ಮೃತದೇಹಗಳು ಪತ್ತೆಯಾಗಿದ್ದು ಸಾವಿನ ಸಂಖ್ಯೆ 25ಕ್ಕೆ ಏರಿಕೆಯಾಗಿದೆ ಎಂದು ಪೊಲೀಸ್ ಮಹಾನಿರ್ದೇಶಕ ಐ ನೊಂಗ್ರಾಂಗ್ ತಿಳಿಸಿದ್ದಾರೆ.

ಮೃತಪಟ್ಟವರ ಪೈಕಿ 12 ಶವಗಳ ಗುರುತು ಪತ್ತಯಾಗಿದೆ. ಶೋಧ ಕಾರ್ಯಾಚರಣೆ ಮುಂದುವರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪರಿಸರ ಹಾನಿ ಮತ್ತು ಸುರಕ್ಷತಾ ಅಪಾಯಗಳನ್ನು ಉಲ್ಲೇಖಿಸಿ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್‌ಜಿಟಿ) 2014ರಲ್ಲಿ ಮೇಘಾಲಯದಲ್ಲಿ ಇಲಿ ರಂಧ್ರ ಕಲ್ಲಿದ್ದಲು ಗಣಿಗಾರಿಕೆ ಮತ್ತು ಇತರ ಅವೈಜ್ಞಾನಿಕ ಗಣಿಗಾರಿಕೆಗೆ ನಿಷೇಧ ಹೇರಿತ್ತು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries