ಮಂಜೇಶ್ವರ: ಕನ್ನಡ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರು ಮತ್ತು ಕಾಸರಗೋಡು ಜಿಲ್ಲಾ ಕನ್ನಡ ಲೇಖಕರ ಸಂಘದ ಸಹಯೋಗದಲ್ಲಿ 'ಕಾಸರಗೋಡಿನಲ್ಲಿ ಕನ್ನಡ ಅಸ್ಮಿತೆ-ಯುವಶಕ್ತಿ ಮತ್ತು ಭವಿಷ್ಯ 'ಎಂಬ ವಿಷಯದ ಕುರಿತು ವಿಚಾರ ಸಂಕಿರಣ ಫೆ.26ರಂದು ಮಂಜೇಶ್ವರ ಗೋವಿಂದ ಪೈ ಸ್ಮಾರಕ ಸರ್ಕಾರಿ ಕಾಲೇಜಿನಲ್ಲಿ ಜರುಗಲಿದೆ.
ಮಂಜೇಶ್ವರ ಗೋವಿಂದ ಪೈ ಸ್ಮಾರಕ ಸರ್ಕಾರಿ ಕಾಲೇಜಿನ ಕನ್ನಡ ವಿಭಾಗ ಮತ್ತು ಗಿಳಿವಿಂಡು ಕನ್ನಡ ಸಾಹಿತ್ಯಿಕ ಮತ್ತು ಸಾಂಸ್ಕøತಿಕ ವೇದಿಕೆಯ ಸಹಕಾರದೊಂದಿಗೆ ಕಾರ್ಯಕ್ರಮ ನಡೆಯುವುದು. ಬೆಳಗ್ಗೆ 10ಕ್ಕೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಡಾ ಪುರುಷೋತ್ತಮ ಬಿಳಿಮಲೆ ಸಮಾರಂಭ ಉದ್ಘಾಟಿಸುವರು. ಜಿಲ್ಲಾ ಕನ್ನಡ ಲೇಖಕರ ಸಂಘದ ಅಧ್ಯಕ್ಷ ಡಾ. ರಮಾನಂದ ಬನಾರಿ ಅಧ್ಯಕ್ಷತೆ ವಹಿಸುವರು. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಡಾ.ಸಂತೋಷ ಹಾನಗಲ್, ಸಾಹಿತಿ, ಪತ್ರಕರ್ತ ರಾಧಾಕೃಷ್ಣ.ಕೆ ಉಳಿಯತ್ತಡ್ಕ ಅತಿಥಿಗಳಾಗಿರುವರು. ಖ್ಯಾತ ಸಾಹಿತಿ ಡಾ ರಮಾನಂದ ಬನಾರಿ ಅವರ ಸಾರಥ್ಯದಲ್ಲಿ ಪ್ರಕಟಗೊಳ್ಳುತ್ತಿರುವ 'ಕನ್ನಡಿಯಲ್ಲಿ ಕನ್ನಡಿಗ 'ಕೃತಿ ಸರಣಿಯ ಆರನೇ ಸಂಚಿಕೆಯನ್ನು ಸಾಹಿತಿ, ನಿವೃತ್ತ ಪ್ರಾಧ್ಯಾಪಕಿ ಡಾ. ಪ್ರಮೀಳಾ ಮಾಧವ್ ಬಿಡುಗಡೆಗೊಳಿಸುವರು.
ಮಂಜೇಶ್ವರ ಗೋವಿಂದ ಪೈ ಸ್ಮಾರಕ ಸರ್ಕಾರಿ ಕಾಲೇಜಿನ ಪ್ರಾಂಶುಪಾಲ ಡಾ. ಮಹಮ್ಮದಾಲಿ ಪ್ರಾಸ್ತಾವಿಕ ಭಾಷಣ ಮಾಡುವರು. ಕಾಸರಗೋಡು ಜಿಲ್ಲಾ ಕನ್ನಡ ಲೇಖಕರ ಸಂಘದ ಕಾರ್ಯದರ್ಶಿ ಡಾ. ಕಿಶೋರ್ ಕುಮಾರ್ ರೈ ಶೇಣಿ, ಕೋಶಾಧಿಕಾರಿ ವಿಶಾಲಾಕ್ಷ ಪುತ್ರಕಳ, ಗೋವಿಂದ ಪೈ ಸ್ಮಾರಕ ಸರಕಾರಿ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಶಿವಶಂಕರ. ಪಿ ಉಪಸ್ಥಿತರಿರುವರು.
ಈ ಸಂದರ್ಭ ಕಾಸರಗೋಡಿನ ಕನ್ನಡದ ಇತಿಹಾಸ ಮತ್ತು ಸವಾಲುಗಳ ಕುರಿತು ವಿಚಾರಗೋಷ್ಠಿ ನಡೆಯುವುದು. ವಿವಿಧ ವಿಷಯಗಳ ಬಗ್ಗೆ ಆಕಾಶವಾಣಿಯ ವಿಶ್ರಾಂತ ನಿರ್ದೇಶಕ ಡಾ. ಸದಾನಂದ ಪೆರ್ಲ, ಕಾಸರಗೋಡು ಸರ್ಕಾರಿ ಕಾಲೇಜಿನ ಪ್ರಾಧ್ಯಾಪಕ ರಾಧಾಕೃಷ್ಣ ಬೆಳ್ಳೂರು, ಉಪನ್ಯಾಸಕ ಡಾ. ಬಾಲಕೃಷ್ಣ ಹೊಸಂಗಡಿ, ಡಾ. ಶ್ರೀಧರ.ಎನ್ ಕು.ದೀಕ್ಷಿತ, ಅನಿರುದ್ಧ ಅವರು ಪ್ರಬಂಧ ಮಂಡಿಸುವರು. ಸಹಾಯಕ ಪ್ರಾಧ್ಯಾಪಕ ಡಾ ಸುಜೀಶ್. ಎಸ್ ಸಮನ್ವಯಕಾರರಾಗಿ ಭಾಗವಹಿಸುವರು.
ಮಧ್ಯಾಹ್ನ ಸಾಂಸ್ಕೃತಿಕ ವಲಯದ ಕನ್ನಡ ಅಸ್ಮಿತೆಯ ಕುರಿತು ಸಂವಾದ ಕಾರ್ಯಕ್ರಮ ನಡೆಯುವುದು.
ಸಂಜೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಖ್ಯಾತ ವಿಮರ್ಶಕ ಡಾ. ಎಸ್ .ಆರ್ ವಿಜಯಶಂಕರ್ ಬೆಂಗಳೂರು ಸಮಾರೋಪ ಭಾಷಣ ಮಾಡುವರು. ಕಾಸರಗೋಡು ಜಿಲ್ಲಾ ಕನ್ನಡ ಲೇಖಕರ ಸಂಘದ ಕಾರ್ಯಾಧ್ಯಕ್ಷ ಪೆÇ್ರ. ಪಿ .ಎನ್ ಮೂಡಿತ್ತಾಯ ಅಧ್ಯಕ್ಷತೆ ವಹಿಸುವರು.

