HEALTH TIPS

ಅಮೆರಿಕದಲ್ಲಿ ಕೊಲ್ಲಲ್ಪಟ್ಟ ಭಾರತೀಯ ವಿದ್ಯಾರ್ಥಿನಿ ಕುಟುಂಬಕ್ಕೆ ₹260ಕೋಟಿ ಪರಿಹಾರ

ಸಿಯಾಟಲ್: ಪೊಲೀಸ್‌ ಅಧಿಕಾರಿ ಚಲಾಯಿಸುತ್ತಿದ್ದ ವಾಹನ ಡಿಕ್ಕಿ ಹೊಡೆದು ಮೃತಪಟ್ಟಿದ್ದ ಭಾರತೀಯ ವಿದ್ಯಾರ್ಥಿನಿ ಜಾಹ್ನವಿ ಕಂದುಲ (23) ಅವರ ಕುಟುಂಬಕ್ಕೆ ಅಮೆರಿಕದ ಸಿಯಾಟಲ್‌ನ ಸ್ಥಳೀಯಾಡಳಿತ 29 ದಶಲಕ್ಷ ಡಾಲರ್‌ (₹262 ಕೋಟಿ) ಪರಿಹಾರ ಘೋಷಿಸಿದೆ. 2023ರಲ್ಲಿ ಈ ಘಟನೆ ನಡೆದಿತ್ತು.

ಮಾದಕವಸ್ತು ಸಂಬಂಧಿತ ದೂರವಾಣಿ ಕರೆಗೆ ಪ್ರತಿಕ್ರಿಯಿಸುತ್ತಿದ್ದಾಗ 25 ಕಿ.ಮೀ ವೇಗದಲ್ಲಿ ಚಲಿಸಬೇಕಿದ್ದ ವಲಯದಲ್ಲಿ 74 ಕಿ.ಮೀ ವೇಗದಲ್ಲಿ ವಾಹನ ಚಾಲನೆ ಮಾಡುತ್ತಿದ್ದ ಅಧಿಕಾರಿ ಕೆವಿನ್ ಡೇವ್, ವಿದ್ಯಾರ್ಥಿನಿ ಜಾಹ್ನವಿ ಕಂದುಲಾ ಅವರಿಗೆ ಡಿಕ್ಕಿ ಹೊಡೆದಿದ್ದರು.

'ಜಾಹ್ನವಿ ಕಂದುಲಾ ಅವರ ಸಾವು ಹೃದಯವಿದ್ರಾವಕವಾಗಿತ್ತು. ಈ ಆರ್ಥಿಕ ಪರಿಹಾರವು ಕಂದುಲಾ ಕುಟುಂಬಕ್ಕೆ ಸ್ವಲ್ಪ ಮಟ್ಟಿಗೆ ಶಾಂತಿಯನ್ನು ತರುತ್ತದೆ ಎಂದು ಆಶಿಸುತ್ತೇವೆ'ಎಂಬುದಾಗಿ ಸಿಯಾಟೆಲ್ ನಗರದ ಸ್ಥಳೀಯಾಡಳಿತ ಹೇಳಿದೆ.

ಈ ಸಂಬಂಧ ವಕೀಲ ಎರಿಕಾ ಇವಾನ್ಸ್ ಬುಧವಾರ ಹೇಳಿಕೆ ಬಿಡುಗಡೆ ಮಾಡಿದ್ದು, ಜಾಹ್ನವಿ ಕಂದುಲಾ ಅವರ ಜೀವಕ್ಕೆ ಬೆಲೆ ಕಟ್ಟಲಾಗದು. ಈ ಪರಿಹಾರವು ಅವರ ಕುಟುಂಬ, ಅವರ ಸ್ನೇಹಿತರು ಮತ್ತು ನಮ್ಮ ಸಮುದಾಯಕ್ಕೆ ಅತ್ಯಂತ ಮುಖ್ಯವಾಗಿದೆ ಎಂದು ತಿಳಿಸಿದ್ದಾರೆ.

ಕಂದುಲಾ ಅವರು ಸಿಯಾಟಲ್ ನಾರ್ಥ್ ಈಸ್ಟರ್ನ್ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ಮಾಹಿತಿ ವ್ಯವಸ್ಥೆಗಳ ಸಂಬಂಧಿತ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿದ್ದರು.

ಕಳೆದ ಶುಕ್ರವಾರ ಕಿಂಗ್ ಕೌಂಟಿ ಸುಪೀರಿಯರ್ ಕೋರ್ಟ್‌ನಲ್ಲಿ ಕಕ್ಷಿದಾರರು ಪರಿಹಾರ ಇತ್ಯರ್ಥದ ನೋಟಿಸ್ ಸಲ್ಲಿಸಿದ್ದರು. ಸ್ಥಳೀಯ ಸುದ್ದಿ ತಾಣ ಪಬ್ಲಿಕೋಲಾ ಮೊದಲು ಈ ಬಗ್ಗೆ ವರದಿ ಮಾಡಿತ್ತು.

ಕಂದುಲಾ ಅವರ ಸಾವು ಆಕ್ರೋಶ ಮತ್ತು ಪ್ರತಿಭಟನೆಗಳನ್ನು ಹುಟ್ಟುಹಾಕಿತ್ತು. ಪ್ರಕರಣ ಕುರಿತಂತೆ ತನಿಖೆಗೂ ರಾಯಭಾರ ಕಚೇರಿ ಮನವಿ ಮಾಡಿತ್ತು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries