ಇಸ್ಲಾಮಾಬಾದ್: ಅಫ್ಗಾನಿಸ್ತಾನ ವಿರುದ್ಧ ನಡೆಸುತ್ತಿರುವ ಕಾರ್ಯಾಚರಣೆಯಲ್ಲಿ ತಾಲಿಬಾನ್ ಸಿಬ್ಬಂದಿ ಹಾಗೂ ಅದರ ಸಹ ಸಂಘಟನೆಗಳ ಸುಮಾರು 300 ಮಂದಿಯನ್ನು ಹತ್ಯೆ ಮಾಡಿರುವುದಾಗಿ ಪಾಕಿಸ್ತಾನ ತಿಳಿಸಿದೆ.
ತಾಲಿಬಾನ್ ಆಡಳಿತವಿರುವ ಅಫ್ಗಾನಿಸ್ತಾನದ 397 ಮಂದಿಯನ್ನು ಹತ್ಯೆ ಮಾಡಲಾಗಿದೆ.
'ಘಜಬ್ ಲಿಲ್ ಹಕ್' ಹೆಸರಿನಡಿ ಕಾರ್ಯಾಚರಣೆ ನಡೆಸಿದ್ದ ಸೇನೆ, ಅಫ್ಗಾನಿಸ್ತಾನದ 37 ಸ್ಥಳಗಳ ಮೇಲೆ ವಾಯುದಾಳಿ ನಡೆಸಿದೆ. ಅಫ್ಗನ್‌ನ 104 ಸೇನಾ ಶಿಬಿರಗಳನ್ನು ನಾಶ ಪಡಿಸಿದ್ದು, 22 ಗಡಿ ಶಿಬಿರಗಳನ್ನು ವಶಕ್ಕೆ ಪಡೆಯಲಾಗಿದೆ. 163 ಕ್ಷಿಪಣಿ, ಶಸ್ತ್ರಸಜ್ಜಿತ ವಾಹನಗಳನ್ನು ನಾಶಪಡಿಸಲಾಗಿದೆ' ಎಂದು ಅವರು ಹೇಳಿದ್ದಾರೆ.
ಪಾಕಿಸ್ತಾನ-ಅಫ್ಗಾನಿಸ್ತಾನದ 2,600 ಕಿಲೋ ಮೀಟರ್ ಉದ್ದದ ಗಡಿಗೆ ಹೊಂದಿಕೊಂಡ ಪಾಕ್‌ನ 53 ಸ್ಥಳಗಳನ್ನು ಗುರಿಯಾಗಿಸಿ ಅಫ್ಗಾನಿಸ್ತಾನ ದಾಳಿ ಮಾಡಿತ್ತು. ಇದಕ್ಕೆ ಪ್ರತ್ಯುತ್ತರವಾಗಿ ಶುಕ್ರವಾರ ಪಾಕಿಸ್ತಾನ ಸೇನೆ ಅಫ್ಗಾನಿಸ್ತಾನದ ರಾಜಧಾನಿ ಕಾಬೂಲ್ ಮತ್ತು ಕಂದಹಾರ್‌ಗಳ ಮೇಲೂ ಬಾಂಬ್ ದಾಳಿ ನಡೆಸಿತ್ತು.
ಪಾಕ್‌ಗೆ ಅಮೆರಿಕ ಬೆಂಬಲ: ಅಫ್ಗಾನಿಸ್ತಾನ ವಿರುದ್ಧ ಯುದ್ಧ ಘೋಷಿಸಿರುವ ಪಾಕಿಸ್ತಾನಕ್ಕೆ ಅಮೆರಿಕ ಬೆಂಬಲ ಸೂಚಿಸಿದೆ. ಅಫ್ಗಾನಿಸ್ತಾನ ಸರ್ಕಾರದ ಮೇಲೆ ಒತ್ತಡ ಹೇರಲು ಪಾಕಿಸ್ತಾನ ಆರಂಭಿಸಿರುವ ಸೇನಾ ಕಾರ್ಯಾಚರಣೆಯನ್ನು ನಾವು ನಿಲ್ಲಿಸುವುದಿಲ್ಲ ಎಂದು ಹೇಳಿದೆ.
ಮಾತುಕತೆಗೆ ಸಿದ್ಧ: ತಾಲಿಬಾನ್
ಪರಿಸ್ಥಿತಿ ವಿಷಮಗೊಳ್ಳುತ್ತಿದ್ದಂತೆಯೇ ಪಾಕಿಸ್ತಾನದ ಜೊತೆ ಮಾತುಕತೆಗೆ ಅಫ್ಗಾನಿಸ್ತಾನ ತಾಲಿಬಾನ್ ಉತ್ಸುಕತೆ ತೋರಿದೆ.
'ಅಫ್ಗಾನಿಸ್ತಾನವು ಪರಸ್ಪರ ತಿಳಿವಳಿಕೆ ಮತ್ತು ಗೌರವದೊಂದಿಗೆ ವಿಚಾರಗಳನ್ನು ಇತ್ಯರ್ಥ ಮಾಡಿಕೊಳ್ಳಲು ಸದಾ ಬಯಸುತ್ತದೆ' ಎಂದು ವಿದೇಶಾಂಗ ಸಚಿವ ಅಮಿರ್ ಖಾನ್ ಮುತ್ತಕಿ ಹೇಳಿದ್ದಾರೆ. ಸೌದಿ ಅರೇಬಿಯಾ ಮತ್ತು ಕತಾರ್ ದೇಶಗಳು ಶಾಂತಿ ಸ್ಥಾಪನೆಗೆ ಪ್ರಯತ್ನಿಸುತ್ತಿವೆ ಎಂದು ಮೂಲಗಳು ತಿಳಿಸಿವೆ.

