HEALTH TIPS

ಪಾಕಿಸ್ತಾನ: ಮಸೀದಿಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 31 ಮಂದಿ ಸಾವು

ಇಸ್ಲಾಮಾಬಾದ್: ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನ ಶಿಯಾ ಮಸೀದಿಯಲ್ಲಿ ಆತ್ಮಾಹುತಿ ಬಾಂಬ್‌ ದಾಳಿ ನಡೆದಿದೆ. ಈ ಘಟನೆಯಲ್ಲಿ 31 ಮಂದಿ ಮೃತಪಟ್ಟಿದ್ದು, 169 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಶೆಹಜಾದ್ ಟೌನ್ ಪ್ರದೇಶದ ತರ್ಲೈ ಇಮಾಂಬರ್ಗಾದಲ್ಲಿ ಈ ಸ್ಫೋಟ ಸಂಭವಿಸಿದೆ.

ಶುಕ್ರವಾರ ‍ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸುತ್ತಿದ್ದ ವೇಳೆ ಆತ್ಮಾಹುತಿ ಬಾಂಬರ್‌ ತನ್ನನ್ನು ತಾನು ಸ್ಫೋಟಿಸಿಕೊಂಡ ಪರಿಣಾಮ 31 ಮಂದಿ ಮೃತಪಟ್ಟಿದ್ದಾರೆ. ಸದ್ಯಕ್ಕೆ ಯಾವುದೇ ಉಗ್ರ ಸಂಘಟನೆ ಈ ಸ್ಫೋಟದ ಹೊಣೆ ಹೊತ್ತಿಕೊಂಡಿಲ್ಲ.

ಆದರೆ, ದಾಳಿಕೋರ ವಿದೇಶಿ ಪ್ರಜೆಯಾಗಿದ್ದು, ತೆಹ್ರೀಕ್-ಎ-ತಾಲಿಬಾನ್ ಪಾಕಿಸ್ತಾನ್ (ಟಿಟಿಪಿ) ಜತೆ ಸಂಪರ್ಕ ಹೊಂದಿದ್ದಾನೆ ಎಂದು ಪೊಲೀಸರು ಶಂಕಿಸಿದ್ದಾರೆ.

ರಕ್ಷಣಾ ತಂಡಗಳು ಮತ್ತು ಪೊಲೀಸರು ದಾಳಿ ನಡೆದ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಕೈಗೊಂಡಿವೆ. ಗಾಯಾಳುಗಳನ್ನು ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗುತ್ತಿದ್ದು, ಪರಿಸ್ಥಿತಿಯನ್ನು ನಿಯಂತ್ರಿಸಲು ಆಸ್ಪತ್ರೆಗಳಲ್ಲಿ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ .

ಇಸ್ಲಾಮಾಬಾದ್‌ನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ಕಟ್ಟಡದ ಬಳಿ ಆತ್ಮಾಹುತಿ ಬಾಂಬ್‌ ಸ್ಫೋಟದಲ್ಲಿ 12 ಜನರು ಮೃತಪಟ್ಟ ಮೂರು ತಿಂಗಳೊಳಗೆ ಈ ದಾಳಿ ನಡೆದಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries