ಶರ್ಮಾ ಮತ್ತು ಅವರ ಕುಟುಂಬದ ಸದಸ್ಯರು ರಾಜ್ಯಾದ್ಯಂತ ಸುಮಾರು 12,000 ಬಿಘಾ ಭೂಮಿಯನ್ನು ಆಕ್ರಮಿಸಿಕೊಂಡಿದ್ದಾರೆ ಎಂದು ಅಸ್ಸಾಂ ಕಾಂಗ್ರೆಸ್ ಅಧ್ಯಕ್ಷರಾಗಿರುವ ಗೊಗೊಯ್ ಕಳೆದ ವಾರ ಆರೋಪಿಸಿದ್ದರು. ಇದರ ಬೆನ್ನಲ್ಲೆ ಯಾವುದೇ ಪುರಾವೆಗಳಿಲ್ಲದೆ ಹೇಳಿಕೆ ನೀಡಿದ್ದಕ್ಕಾಗಿ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಅಸ್ಸಾಂ ಮುಖ್ಯಮಂತ್ರಿ ಘೋಷಿಸಿದ್ದರು.
"ಪತ್ರಿಕಾಗೋಷ್ಠಿಯ ಮೂಲಕ ನನ್ನ ವಿರುದ್ಧ ಸುಳ್ಳು, ದುರುದ್ದೇಶಪೂರಿತ ಮತ್ತು ಮಾನಹಾನಿಕರ ಆರೋಪಗಳನ್ನು ಮಾಡಿದ್ದಕ್ಕಾಗಿ ಕಾಂಗ್ರೆಸ್ ನಾಯಕರಾದ ಜಿತೇಂದ್ರ ಸಿಂಗ್, ಭೂಪೇಶ್ ಬಾಘೇಲ್ ಮತ್ತು ಗೌರವ್ ಗೊಗೊಯ್ ವಿರುದ್ಧ 500 ಕೋಟಿ ರೂ. ಪರಿಹಾರ ಕೋರಿ ನಾನು ಮಾನನಷ್ಟ ಮೊಕದ್ದಮೆ ಹೂಡಿದ್ದೇನೆ" ಎಂದು ಹಿಮಂತ ಬಿಸ್ವಾ ಶರ್ಮಾ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

