ಕೋಲ್ಕತ್ತಾ: ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತ್ತಾದಲ್ಲಿ ಶುಕ್ರವಾರ 5.4 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಕೋಲ್ಕತ್ತಾ ಮತ್ತಿತರ ಭಾಗಗಳಲ್ಲಿ ಕಂಪನದ ಅನುಭವವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಭೂಕಂಪದ ಕೇಂದ್ರ ಬಿಂದು ಬಾಂಗ್ಲಾದೇಶದಲ್ಲಿ ದಾಖಲಾಗಿದೆ ಎಂದು ವರದಿಯಾಗಿದೆ. ಪಶ್ಚಿಮ ಬೆನಾಲ್ ರಾಜಧಾನಿಯಲ್ಲಿ ಮಧ್ಯಾಹ್ನ 1.22 ರ ಸುಮಾರಿಗೆ ಭೂಕಂಪ ಸಂಭವಿಸಿದೆ. ಜನರು ತಮ್ಮ ಅನುಭವಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.
ಇದುವರೆಗೆ ಯಾವುದೇ ಪ್ರಾಣಹಾನಿ ಅಥವಾ ಆಸ್ತಿ ನಷ್ಟದ ಬಗ್ಗೆ ವರದಿಯಾಗಿಲ್ಲ. ಕೋಲ್ಕತ್ತಾದಲ್ಲಿ ಈ ತಿಂಗಳು ಭೂಕಂಪ ಸಂಭವಿಸಿದ್ದು ಇದು ಎರಡನೇ ಬಾರಿ. ಈ ಹಿಂದೆ ಫೆಬ್ರವರಿ 3 ರಂದು ಲಘು ಭೂಕಂಪ ಆಗಿತ್ತು.
ನೆರೆಯ ರಾಜ್ಯಗಳು ಮತ್ತು ಬಾಂಗ್ಲಾದೇಶದಲ್ಲಿಯೂ ಭೂಕಂಪದ ಅನುಭವವಾಗಿದೆ. ಇಒSಅ ದತ್ತಾಂಶದ ಪ್ರಕಾರ, ಮ್ಯಾನ್ಮಾರ್‌ನ ಅಕ್ಯಾಬ್‌ನಿಂದ ಪೂರ್ವಕ್ಕೆ 70 ಮೈಲುಗಳಷ್ಟು ದೂರದಲ್ಲಿ ಭೂಕಂಪನ ಸಂಭವಿಸಿದೆ. ಕೋಲ್ಕತ್ತಾ ಸೇರಿದಂತೆ ಪಶ್ಚಿಮ ಬಂಗಾಳದ ಕೆಲವು ಭಾಗಗಳಲ್ಲಿ ಮತ್ತು ನೆರೆಯ ಬಾಂಗ್ಲಾದೇಶದಲ್ಲಿ ಕಂಪನದ ಅನುಭವವಾಗಿದೆ. 10 ಕಿಲೋಮೀಟರ್ ಅಥವಾ 6.21 ಮೈಲಿ ಆಳದಲ್ಲಿ ಭೂಕಂಪ ಸಂಭವಿಸಿದೆ ಎಂದು ಜರ್ಮನ್ ರಿಸರ್ಚ್ ಸೆಂಟರ್ ಫಾರ್ ಜಿಯೋಸೈನ್ಸ್ ಹೇಳಿದೆ.

