ಶ್ರೀನಗರ: ಕೇಂದ್ರೀಯ ಮೀಸಲು ಪೊಲೀಸ್ ಪಡೆಯ (ಸಿಆರ್‌ಪಿಎಫ್) ವಾಹನವು ನದಿಗೆ ಉರುಳಿದ ಪರಿಣಾಮ ಒಂಬತ್ತು ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದರು.
ಶ್ರೀನಗರದ ಹೊರ ವಲಯದಲ್ಲಿರುವ ಅಹ್ಮದ್‌ನಗರದಲ್ಲಿ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿ ವಾಹನವು ನದಿಗೆ ಉರುಳಿದೆ.
ಗಾಯಾಳು ಸಿಬ್ಬಂದಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಗಾಯಾಳುಗಳ ಆರೋಗ್ಯ ಸ್ಥಿರವಾಗಿದೆ ಎಂದು ಮಾಹಿತಿ ನೀಡಿದರು.

