AI ಶೃಂಗಸಭೆ ವಿಷಯವನ್ನು ಪ್ರಸ್ತಾಪಿಸಿದ ಭಾನು, "ದೇಶದ ಯುವಕರು ಇನ್ನು ಮುಂದೆ ಮೌನವಾಗಿರುವುದಿಲ್ಲ 'ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ' ಎಂಬುದು ಕೇವಲ ಘೋಷಣೆಯಲ್ಲ, ಬದಲಾಗಿ ಲಕ್ಷಾಂತರ ನಿರುದ್ಯೋಗಿ ಯುವಕರ ಆಕ್ರೋಶವಾಗಿದೆ.
ಅಮೆರಿಕದೊಂದಿಗಿನ ವ್ಯಾಪಾರ ಒಪ್ಪಂದವು ನಮ್ಮ ರೈತರು ಮತ್ತು ಸಾರ್ವಜನಿಕರ ಹಿತಾಸಕ್ತಿಗಳಿಗೆ ಬಗೆದ ದ್ರೋಹವಾಗಿದೆ, ಇದು ಅಮೆರಿಕಕ್ಕೆ ಮಾತ್ರ ಪ್ರಯೋಜನವನ್ನು ನೀಡುತ್ತದೆ. ಪ್ರಜಾಪ್ರಭುತ್ವದಲ್ಲಿ ಶಾಂತಿಯುತ ಪ್ರತಿಭಟನೆ ನಮ್ಮ ಹಕ್ಕು ಮತ್ತು ನಾವು ಯುವಜನತೆಯ ಪರವಾಗಿ ಧ್ವನಿಯನ್ನು ಎತ್ತುವುದನ್ನು ಮುಂದುವರಿಸುತ್ತೇವೆ" ಎಂದು ಹೇಳಿದ್ದರು.
ಉದಯ್ ಭಾನು ಚಿಬ್ ಅವರ ಬಂಧನವನ್ನು ಕಾಂಗ್ರೆಸ್ ಖಂಡಿಸಿದೆ. ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಛತ್ತೀಸ್‌ಗಡದ ಮಾಜಿ ಮುಖ್ಯಮಂತ್ರಿ ಭೂಪೇಶ್ ಬಘೇಲ್, ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಮತ್ತು ಇತರರನ್ನು ಅಕ್ರಮವಾಗಿ ಬಂಧಿಸಿರುವುದನ್ನು ನಾನು ಬಲವಾಗಿ ಖಂಡಿಸುತ್ತೇನೆ. ಪ್ರಜಾಪ್ರಭುತ್ವದಲ್ಲಿ ಅತಿ ದೊಡ್ಡ ಅಸ್ತ್ರವೆಂದರೆ ಯುವಜನರು ಧ್ವನಿ ಎತ್ತುವುದಾಗಿದೆ. ಪ್ರತಿಭಟನೆ ನಡೆಸುವುದು ಅಪರಾಧವಲ್ಲ ಎಂದು ಹೇಳಿದ್ದಾರೆ.

