HEALTH TIPS

ಮ್ಯಾಟ್ರಿಮೋನಿ ವೆಬ್‌ಸೈಟ್ ಶಾದಿ ಡಾಟ್ ಕಾಮ್ ಮಾಲೀಕರಿಗೆ ರಕ್ಷಣೆ ನೀಡಿದ 'ಸುಪ್ರೀಂ'

ನವದೆಹಲಿ: ಪ್ರಸಿದ್ಧ ಮ್ಯಾಟ್ರಿಮೋನಿ ವೆಬ್‌ಸೈಟ್‌ ಶಾದಿ ಡಾಟ್‌ ಕಾಮ್‌ (shaadi.com) ವಿರುದ್ಧ ದಾಖಲಾಗಿದ್ದ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸ್ಥಾಪಕ ಅನುಪಮ್ ಮಿತ್ತಲ್ ಸೇರಿದಂತೆ ಮೂವರಿಗೆ ಸುಪ್ರೀಂ ಕೋರ್ಟ್‌ ಬಂಧನದಿಂದ ಮಧ್ಯಂತರ ರಕ್ಷಣೆ ನೀಡಿದೆ.

ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಪ್ರಶಾಂತ್ ಕುಮಾರ್ ಮಿಶ್ರಾ ಮತ್ತು ಎನ್.ವಿ. ಅಂಜಾರಿಯಾ ಅವರಿದ್ದ ಪೀಠವು ತೆಲಂಗಾಣ ಹೈಕೋರ್ಟ್‌ನ ಆದೇಶವನ್ನು ರದ್ದುಗೊಳಿಸಿ, ಪ್ರಕರಣವನ್ನು ಹೊಸದಾಗಿ ಪರಿಗಣಿಸುವಂತೆ ನಿರ್ದೇಶನ ನೀಡಿದೆ.

ಜತೆಗೆ ಶಾದಿ ಡಾಟ್‌ ಕಾಮ್‌ ಸಂಸ್ಥಾಪಕ ಅನುಪಮ್ ಮಿತ್ತಲ್ ಸೇರಿದಂತೆ ಮೂವರ ವಿರುದ್ಧ ಎರಡು ವಾರಗಳವರೆಗೆ ಯಾವುದೇ ಬಲವಂತದ ಕ್ರಮಗಳನ್ನು ತೆಗೆದುಕೊಳ್ಳಬಾರದು ಎಂದು ನ್ಯಾಯಾಲಯವು ಸೂಚಿಸಿದೆ.

ತೆಲಂಗಾಣ ಹೈಕೋರ್ಟ್‌ನ ಆದೇಶವನ್ನು ಪ್ರಶ್ನಿಸಿ ಅನುಪಮ್ ಮಿತ್ತಲ್ ಅವರು ಸುಪ್ರೀಂಕೋರ್ಟ್‌ ಮೊರೆ ಹೋಗಿದ್ದರು.

ಶಾದಿ ಡಾಟ್‌ ಕಾಮ್‌ ವೈಬ್‌ಸೈಟ್‌ನಲ್ಲಿ ವ್ಯಕ್ತಿಯೊಬ್ಬರು ನಕಲಿ ಪ್ರೊಫೈಲ್ ರಚಿಸಿ, ತಮ್ಮಿಂದ ₹11 ಲಕ್ಷ ಪಡೆದು ವಂಚಿಸಿದ್ದಾರೆ. ಆದರೆ ಇಂತಹ ಫ್ರೊಫೈಲ್‌ ಸರಿಯಾಗಿ ಪರಿಶೀಲನೆ ಮಾಡಿಲ್ಲ' ಎಂದು ಸಂಸ್ಥಾಪಕರ ವಿರುದ್ಧ ಮಹಿಳೆಯೊಬ್ಬರು ದೂರು ದಾಖಲಿಸಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries