ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ದೇವಸ್ಥಾನದ ಚಿನ್ನ ಕಳವು ಪ್ರಕರಣದಲ್ಲಿ ತಿರುವಾಂಕೂರು ದೇವಸ್ವಂ ಮಂಡಳಿಯ ಮಾಜಿ ಅಧ್ಯಕ್ಷ ಎನ್.ವಾಸು ಅವರಿಗೆ ಬುಧವಾರ ಜಾಮೀನು ಲಭಿಸಿದೆ.
ವಾಸು ಅವರ ಬಂಧನವಾಗಿ 90 ದಿನ ಕಳೆದರೂ ದೋಷಾರೋಪ ಪಟ್ಟಿ ಸಲ್ಲಿಕೆಯಾಗದ ಕಾರಣ ಕೊಲ್ಲಂನ ವಿಚಕ್ಷಣಾ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ.
ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ ಸೇರಿದಂತೆ ನಾಲ್ವರು ಆರೋಪಿಗಳಿಗೆ ಈಗಾಗಲೇ ಜಾಮೀನು ಲಭಿಸಿದೆ. ಪ್ರಕರಣದ ತನಿಖೆಯ ದಾರಿ ತಪ್ಪಿಸಲಾಗುತ್ತಿದೆ ಎಂದು ಕಾಂಗ್ರೆಸ್ ಮತ್ತು ಬಿಜೆಪಿ ನಿರಂತರವಾಗಿ ಆರೋಪಿಸುತ್ತಿವೆ.

