HEALTH TIPS

ಅಂಗನವಾಡಿಯಿಂದ ಕಳವು-ಆರೋಪಿ ಬಂಧನ

ಕಾಸರಗೋಡು: ಮಂಜೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯ ಉಪ್ಪಳ ಮಣ್ಣಂಗುಳಿ ಮೈದಾನ ಸನಿಹದ ಅಂಗನವಾಡಿ ಕಟ್ಟಡಕ್ಕೆ ನುಗ್ಗಿ ಮಿಕ್ಸಿ ಸೇರಿದಂತೆ ವಿವಿಧ ಸಾಮಗ್ರಿ ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿ ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ನೆಲ್ಯಾಡಿ ಕೊಕ್ಕಡ ನಿವಾಸಿ ಪ್ರಸಕ್ತ ಉಪ್ಪಳ ಮಣ್ಣಂಗುಳಿಯಲ್ಲಿ ಬಾಡಿಗೆ ಕ್ವಾಟ್ರಸ್‍ನಲ್ಲಿ ವಾಸಿಸುತ್ತಿರುವ ಅಶ್ರಫ್ ಬಂಧಿತ.  

ಈತನ ವಿರುದ್ಧ ಮಂಜೇಶ್ವರ ಠಾಣೆಯಲ್ಲಿ ಮೂರು, ಕುಂಬಳೆ ಠಾಣೆಯಲ್ಲಿ ಒಂದು ಕಳವು ಪ್ರಕರಣ ದಾಖಲಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ. 

ಸನಿಹದ ಸಿಸಿ ಟಿವಿ ದೃಶ್ಯಾವಳಿ ಹಾಗೂ ವಿವಿಧ ಮೂಲಗಳಿಂದ ಲಭಿಸಿದ ಮಾಹಿತಿ ಆಧರಿಸಿ ಮಂಜೇಶ್ವರ ಠಾಣೆ ಇನ್ಸ್‍ಪೆಕ್ಟರ್ ಪಿ. ಅಜಿತ್ ಕುಮಾರ್ ಆರೋಪಿಯನ್ನು ಬಂಧಿಸಿದ್ದಾರೆ.

ಕಳವುಗೈದ ಮಿಕ್ಸಿ, ಎರಡು ಕುಕ್ಕರ್, ಒಂದು ಸೌಂಡ್‍ಬಾಕ್ಸ್ ಹಾಗೂ ಇತರ ಪಾತ್ರೆ ಸಾಮಗ್ರಿಗಳನ್ನು ವ್ಯಕ್ತಿಯೊಬ್ಬರಿಗೆ ಮಾರಾಟ ಮಾಡಿದ್ದು, ಇದನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.



 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries