HEALTH TIPS

ನುಳ್ಳಿಪ್ಪಾಡಿ ಶ್ರೀ ಅಯ್ಯಪ್ಪ ಸ್ವಾಮಿ ಕ್ಷೇತ್ರ ಬ್ರಹ್ಮಕಲಶೋತ್ಸವ ಸಮಿತಿ ಸಭೆ

ಕಾಸರಗೋಡು: ನುಳ್ಳಿಪ್ಪಾಡಿ ಶ್ರೀ ಅಯ್ಯಪ್ಪ ಸ್ವಾಮಿ ಕ್ಷೇತ್ರದಲ್ಲಿ  ಬ್ರಹ್ಮಕಲಶೋತ್ಸವವು ಏಪ್ರಿಲ್ 18ರಿಂದ 23ರ ವರೆಗೆ ವಿವಿಧ ವೈದಿಕ, ಧಾರ್ಮಿಕ ಹಾಗೂ ಸಾಂಸ್ಕøಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆ ಯಿಂದ ಜರಗಲಿದೆ.

ಕಾರ್ಯಕ್ರಮವನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಸಭೆಯು ಭಾನುವಾರ ಸಂಜೆ ನುಳ್ಳಿಪ್ಪಾಡಿ ಕ್ಷೇತ್ರ ಪರಿಸರದಲ್ಲಿ ಜರಗಿತು.

ಸಭೆಯಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಬಾಲಕೃಷ್ಣನ್ ಚೆನ್ನಿಕೆರೆ ಅಧ್ಯಕ್ಷತೆ ವಹಿಸಿದ್ದರು.

ಶ್ರೀ ಕ್ಷೇತ್ರ ಸಮಿತಿ ಅಧ್ಯಕ್ಷ ಗಣೇಶ್ ಅಮ್ಮೆ ಅವರು ಮುಂದೆ ಕೈಗೊಳ್ಳಬೇಕಾದ ಕಾರ್ಯ ಚಟುವಟಿಕೆ ಕುರಿತು ಮಾಹಿತಿ ನೀಡಿದರು.

ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಕೃಷ್ಣಪ್ರಸಾದ್ ಕೋಟೆಕಣಿ, ಉಪಾಧ್ಯಕ್ಷ ರಾಮನ್ ಚೆನ್ನಿಕೆರೆ, ಮಹಿಳಾ ಸಮಿತಿ ಅಧ್ಯಕ್ಷೆ ಶೋಭಾ ಅರವಿಂದ ನಾಯ್ಕ್, ಶಿಲ್ಪಾ ವರಪ್ರಸಾದ್ ಮೊದಲಾದವರು ಮಾತನಾಡಿದರು.


ಶ್ರೀ ಕ್ಷೇತ್ರದ ಗುರು ಸ್ವಾಮಿಗಳಾದ ಗೋಪಾಲ ಗುರುಸ್ವಾಮಿ, ನಾರಾಯಣ ಗುರುಸ್ವಾಮಿ, ಮಹಿಳಾ ಸಮಿತಿ ಪದಾಧಿಕಾರಿಗಳು, ವಿವಿಧ ಸಮಿತಿ ಪದಾಧಿಕಾರಿಗಳು ಹಾಗೂ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡರು.

ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯದರ್ಶಿ ಸಂಜಯ್ ಕುಮಾರ್ ಸ್ವಾಗತಿಸಿ, ಕಿಶೋರ್ ಕುಮಾರ್ ವಂದಿಸಿದರು. ಬ್ರಹ್ಮ ಕಲಶೋತ್ಸವ ಸಮಿತಿ ಕೋಶಾಧಿಕಾರಿ ದೇವದಾಸ್ ನುಳ್ಳಿಪ್ಪಾಡಿ ಕಾರ್ಯಕ್ರಮ ನಿರೂಪಿಸಿದರು. 


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries