HEALTH TIPS

ನುಳ್ಳಿಪ್ಪಾಡಿ ಶ್ರೀ ಅಯ್ಯಪ್ಪ ಸ್ವಾಮೀ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ-ಆಮಂತ್ರಣ ಪತ್ರಿಕೆ ಬಿಡುಗಡೆ

ಕಾಸರಗೋಡು: ಭಕ್ತರು ಸನ್ಮನಸ್ಸಿನಿಂದ ನಡೆಸಿಕೊಂಡು ಬರುವ ಸೇವಾ ಕೈಂಕರ್ಯದಿಂದ ಭಗವಂತನು ಸಂತುಷ್ಟನಾಗುವುದಲ್ಲದೆ, ಭಕ್ತರ ಅಭೀಷ್ಟೆ ಈಡೇರಲು ಸಾಧ್ಯ ಎಂದು ಎಡನೀರು ಮಠಾಧೀಶ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿಯವರು ಹೇಳಿದರು. 

ಅವರು ನುಳ್ಳಿಪ್ಪಾಡಿ ಶ್ರೀ ಅಯ್ಯಪ್ಪ ಸ್ವಾಮೀ ದೇವಸ್ಥಾನದಲ್ಲಿ ಏಪ್ರಿಲ್ 18ರಿಂದ 23ರ ವರೆಗೆ ನಡೆಯಲಿರುವ ಬ್ರಹ್ಮಕಲಶೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಶ್ರೀ ಕ್ಷೇತ್ರದಲ್ಲಿ ಬಿಡುಗಡೆಗೊಳಿಸಿ ಆಶೀರ್ವಚನ ನೀಡಿದರು. 

ಶ್ರೀ ಕ್ಷೇತ್ರದ ತಂತ್ರಿವರ್ಯ ಬ್ರಹ್ಮಶ್ರೀ ಉಳಿಯತ್ತಾಯ ವಿಷ್ಣು ಆಸ್ರ ಅನುಗ್ರಹ ಭಾಷಣ ಮಾಡಿದರು. ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಬಾಲಕೃಷ್ಣನ್ ಕೆ.ಎನ್. ಚೆನ್ನಿಕೆರೆ ಅಧ್ಯಕ್ಷತೆ ವಹಿಸಿದ್ದರು. ಕ್ಷೇತ್ರ ಸಮಿತಿ ಅಧ್ಯಕ್ಷ ಗಣೇಶ್ ಅಮೈ,  ನಾರಾಯಣ ಗುರುಸ್ವಾಮಿ, ಬ್ರಹ್ಮಕಲಶೋತ್ಸವ ಸಮಿತಿ ರಕ್ಷಾಧಿಕಾರಿ ವಕೀಲ ಎ.ಸದಾನಂದ ರೈ ಉಪಸ್ಥಿತರಿದ್ದರು. ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಕೃಷ್ಣಪ್ರಸಾದ್ ಕೋಟೆಕಣಿ ಸ್ವಾಗತಿಸಿದರು. ಬ್ರಹ್ಮಕಲಶೋತ್ಸವ ಸಮಿತಿ ಕೋಶಾಧಿಕಾರಿ ದೇವದಾಸ್ ನುಳ್ಳಿಪ್ಪಾಡಿ ಕಾರ್ಯಕ್ರಮ ನಿರೂಪಿಸಿದರು. 



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries