HEALTH TIPS

ಪೆರಡಾಲ ಶ್ರೀ ಉದನೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಬ್ರಹ್ಮಕಲಶೋತ್ಸವ ಸಮಿತಿಯ ಮಹಾಸಭೆ

ಬದಿಯಡ್ಕ: ಕುಂಬಳೆ ಸೀಮೆಯ ಇತಿಹಾಸ ಪ್ರಸಿದ್ಧ ಪೆರಡಾಲ ಶ್ರೀ ಉದನೇಶ್ವರ ದೇವಾಲಯದ ಜೀರ್ಣೋದ್ಧಾರ ನವೀಕರಣ ಕಾರ್ಯಗಳು ಅಂತಿಮ ಹಂದಲ್ಲಿದ್ದು, ಸುಮಾರು 3 ಕೋಟಿಗಳಷ್ಟು ನವೀಕರಣ ಕಾಮಗಾರಿಗಳು ಮುಗಿಸಿ ಬ್ರಹ್ಮಕಲಶೋತ್ಸವದ ಸಿದ್ಧತೆಗಳು ಪ್ರಾರಂಭಗೊಂಡಿದೆ. ಏಪ್ರಿಲ್ 17 ರಿಂದ 28ರ ವರೆಗೆ ಶ್ರೀ ಕ್ಷೇತ್ರದ ಬ್ರಹ್ಮಕಲಶೋತ್ಸವ ಕ್ಷೇತ್ರದ ಆಚಾರ್ಯ ಬ್ರಹ್ಮಶ್ರೀ ರವೀಶ ತಂತ್ರಿ ಕುಂಟಾರು ಇವರ ನೇತೃತ್ವದಲ್ಲಿ ನಡೆಯಲಿರುವುದು. ಶಿವರಾತ್ರಿಯ ಪುಣ್ಯ ದಿನದಂದು ಶ್ರೀ ಕ್ಷೇತ್ರದ ಜೀರ್ಣೋದ್ಧಾರ ಮತ್ತು ಬ್ರಹ್ಮಕಲಶೋತ್ಸವದ ಮಹಾ ಸಭೆ ಜರಗಿತು. ಕ್ಷೇತ್ರದ ಆಡಳಿತ ಮಂಡಳಿ ಅಧ್ಯಕ್ಷ ವೆಂಕಟರಮಣ ಭಟ್ ಚಂಬಲ್ತಿಮಾರ್ ಅಧ್ಯಕ್ಷತೆ ವಹಿಸಿದ್ದರು. 


ವಿವಿಧ ಉಪ ಸಮಿತಿಗಳ ಕಾರ್ಯಗಳ ಬಗ್ಗೆ ಅವಲೋಕನ ನಡೆಯಿತು. ಗೌರವಾಧ್ಯಕ್ಷ ಜಯದೇವ ಖಂಡಿಗೆ, ಕಾರ್ಯಾಧ್ಯಕ್ಷ ಜಗನ್ನಾಥ ರೈ ಪೆರಡಾಲ ಗುತ್ತು, ಕೋಶಾಧಿಕಾರಿ ಸೂರ್ಯನಾರಾಯಣ ಬಿ., ಆಡಳಿತ ಮಂಡಳಿ ಸದಸ್ಯ ಸೀತಾರಾಮ ನವಕಾನ, ಮಾಜಿ ಮೊಕ್ತೇಸರ ಚಂದ್ರಹಾಸ ರೈ ಪೆರಡಾಲಗುತ್ತು, ಕೃಷ್ಣ ಪ್ರಸಾದ್ ರೈ, ವಾರ್ಡು ಸದಸ್ಯ ಗಂಗಾಧರ ಗೋಳಿಯಡ್ಕ, ಗಣೇಶ ಕೃಷ್ಣ ಅಳಕ್ಕೆ, ನರೇಂದ್ರ ಬಿ. ಎನ್., ಇಂಜಿನಿಯರ್ ರಾಜಗೋಪಾಲ ನವಕಾನ, ಉದಯಶಂಕರ್ ಪಿಸ್, ಗಣೇಶ ಪ್ರಸಾದ್ ಕಡಪ್ಪು, ರಾಘವೇಂದ್ರ ಪ್ರಸಾದ್ ಬದಿಯಡ್ಕ, ಸತ್ಯನಾರಾಯಣ ಶರ್ಮಾ, ರಾಜೇಶ್ ಮಾಸ್ತರ್ ಅಗಲ್ಪಾಡಿ  ಮಾತನಾಡಿದರು. ವಿವಿಧ ಉಪಸಮಿತಿಯ ಅಧ್ಯಕ್ಷರು, ಕಾರ್ಯದರ್ಶಿಗಳು, ಮಾತೃಸಮಿತಿ ಪದಾಧಿಕಾರಿಗಳು, ಬ್ರಹ್ಮಕಲಶೋತ್ಸವ ಪದಾಧಿಕಾರಿಗಳು ಸದಸ್ಯರು ಉಪಸ್ಥಿತರಿದ್ದು ಅಭಿಪ್ರಾಯ ವ್ಯಕ್ತಪಡಿಸಿದರು. ಬ್ರಹ್ಮಕಲಶೋತ್ಸವದ ಪ್ರಧಾನ ಕಾರ್ಯದರ್ಶಿ ನಿರಂಜನ ರೈ ಪೆರಡಾಲ ಪ್ರಾಸ್ತಾವಿಕವಾಗಿ ಮಾತನಾಡಿದರು. ಜೊತೆ ಕಾರ್ಯದರ್ಶಿ ಡಾ. ಶ್ರೀಶ ಕುಮಾರ್ ಪಂಜಿತಡ್ಕ ಸ್ವಾಗತಿಸಿ, ಉಪಾಧ್ಯಕ್ಷ ಡಾ. ಶ್ರೀನಿಧಿ ಸರಳಾಯ ವಂದಿಸಿದರು. 



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries