ನವದೆಹಲಿ: ಪರಿಸರ ಕಾರ್ಯಕರ್ತ ಸೊನಮ್ ವಾಂಗ್ಚೂಕ್ ಅವರನ್ನು ರಾಷ್ಟ್ರೀಯ ಭದ್ರತಾ ಕಾಯ್ದೆ ಅಡಿ ಬಂಧಿಸಿರುವುದನ್ನು ಪ್ರಶ್ನಿಸಿ ಪತ್ನಿ ಗೀತಾಂಜಲಿ ಆಂಗ್ಮೊ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಫೆ.8ಕ್ಕೆ ಮುಂದೂಡಿತು.
ನ್ಯಾಯಮೂರ್ತಿಗಳಾದ ಅರವಿಂದ ಕುಮಾರ್ ಮತ್ತು ಪಿ.ಬಿ.ವರಾಳೆ ಅವರ ಪೀಠವು ಗುರುವಾರ ವಿಚಾರಣೆಯನ್ನು ಮುಂದೂಡಿತು. 'ವಾಂಗ್ಚೂಕ್ ಅವರ ಆರೋಗ್ಯ ಸ್ಥಿತಿಯು ತೀರಾ ಹದಗೆಟ್ಟಿದೆ. ಅವರ ಬಂಧನದ ಕುರಿತು ಮತ್ತೊಮ್ಮೆ ಯೋಚಿಸಿ' ಎಂದು ಬುಧವಾರ ವಿಚಾರಣೆ ನಡೆಸಿದ್ದ ಪೀಠವು ಕೇಂದ್ರ ಸರ್ಕಾರವನ್ನು ಆಗ್ರಹಿಸಿತ್ತು.

