HEALTH TIPS

ಪ್ರತಿಭಟನೆಯೊಂದೇ ದಾರಿ: ಭಾರತ-ಅಮೆರಿಕ ವ್ಯಾಪಾರ ಒಪ್ಪಂದಕ್ಕೆ ಬಿಕೆಯು ವಿರೋಧ

ನವದೆಹಲಿ: ಭಾರತ-ಅಮೆರಿಕದ ವ್ಯಾಪಾರ ಒಪ್ಪಂದವನ್ನು ಟೀಕಿಸಿರುವ ಭಾರತೀಯ ಕಿಸಾನ್‌ ಯೂನಿಯನ್‌(ಬಿಕೆಯು) ಮುಖಂಡ ರಾಕೇಶ್‌ ಟಿಕಾಯತ್‌, ರೈತರ ಹಿತಾಸಕ್ತಿಗಳನ್ನು ರಕ್ಷಿಸುವ ಬಗ್ಗೆ ಕೇಂದ್ರ ಸರ್ಕಾರ ಸುಳ್ಳು ಹೇಳುತ್ತಿದೆ ಎಂದು ಆರೋಪಿಸಿದ್ದಾರೆ.

ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, 'ಈ ಒಪ್ಪಂದ ಭಾರತಕ್ಕೆ ಅಪಾಯಕಾರಿಯಾಗಿ‌ದ್ದು, ನಾವು ಮಾತನಾಡಬೇಕಾಗುತ್ತದೆ' ಎಂದಿದ್ದಾರೆ.

'ಇದು ಏಕಪಕ್ಷೀಯ, ಒತ್ತಡದ ಒಪ್ಪಂದವಾಗಿದೆ. ಭಾರತದ ರೈತರು ಇದನ್ನು ಒಪ್ಪುವುದಿಲ್ಲ. ಅವರು ಸಬ್ಸಿಡಿ ಸರಕುಗಳನ್ನು ಸುರಿಯುತ್ತಾರೆ. ಇಲ್ಲಿನ ರೈತರು ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಲು ಸಾಧ್ಯವಾಗುವುದಿಲ್ಲ' ಎಂದು ಹೇಳಿದ್ದಾರೆ.

ರೈತರನ್ನು ರಕ್ಷಿಸಲಾಗುವುದು ಎಂಬ ಸರ್ಕಾರದ ಭರವಸೆಯ ಬಗ್ಗೆ ಪ್ರತಿಕ್ರಿಯಿಸಿದ ಟಿಕಾಯತ್, 'ಸರ್ಕಾರ ಸುಳ್ಳು ಹೇಳುತ್ತಿದೆ. ಅವರು ಏನು ಬೇಕಾದರೂ ಹೇಳಿಕೊಳ್ಳಬಹುದು. ಪ್ರತಿಭಟನೆಯೊಂದೇ ದಾರಿ' ಎಂದು ಹೇಳಿದ್ದಾರೆ.

ಮುಂದುವರಿದು, 'ದೆಹಲಿ ದೂರವಿಲ್ಲ... ನಮ್ಮ ಟ್ರ್ಯಾಕ್ಟರ್‌ಗಳು ಯಾವಾಗಲೂ ಸಿದ್ಧವಾಗಿವೆ...' ಎಂದು ಪ್ರತಿಭಟನೆಯ ಎಚ್ಚರಿಕೆ ನೀಡಿದ್ದಾರೆ.

ಫೆಬ್ರುವರಿ 12ರಂದು ನಡೆಯಲಿರುವ ಸಾರ್ವತ್ರಿಕ ಮುಷ್ಕರಕ್ಕೆ ರೈತರು ಬೆಂಬಲ ಸೂಚಿಸಿದ್ದಾರೆ ಎಂದು ಇದೇ ವೇಳೆ ಹೇಳಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries