ಮಂಜೇಶ್ವರ: ಕನ್ನಡ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರು ಮತ್ತು ಕಾಸರಗೋಡು ಜಿಲ್ಲಾ ಕನ್ನಡ ಲೇಖಕರ ಸಂಘದ ಸಹಯೋಗದಲ್ಲಿ 'ಕಾಸರಗೋಡಿನಲ್ಲಿ ಕನ್ನಡ ಅಸ್ಮಿತೆ ಯುವಶಕ್ತಿ ಮತ್ತು ಭವಿಷ್ಯ'ಎಂಬ ವಿಷಯದ ಕುರಿತು ಒಂದು ದಿನದ ವಿಚಾರ ಸಂಕಿರಣ ಫೆ. 26ರಂದು ಜರುಗಲಿದೆ.
ಮಂಜೇಶ್ವರ ಗೋವಿಂದ ಪೈ ಸ್ಮಾರಕ ಸರ್ಕಾರಿ ಕಾಲೇಜಿನ ಕನ್ನಡ ವಿಭಾಗ ಮತ್ತು ಗಿಳಿವಿಂಡು ಕನ್ನಡ ಸಾಹಿತ್ಯಕ ಮತ್ತು ಸಾಂಸ್ಕøತಿಕ ವೇದಿಕೆಯ ಸಹಕಾರದೊಂದಿಗೆ ಕಾರ್ಯಕ್ರಮ ನಡೆಯಲಿದೆ.
ಬೆಳಗ್ಗೆ 10ಕ್ಕೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ ಸಮಾರಂಭ ಉದ್ಘಾಟಿಸುವರು. ಕಾಸರಗೋಡು ಜಿಲ್ಲಾ ಕನ್ನಡ ಲೇಖಕರ ಸಂಘದ ಅಧ್ಯಕ್ಷ ಡಾ. ರಮಾನಂದ ಬನಾರಿ ಅಧ್ಯಕ್ಷತೆ ವಹಿಸುವರು. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಡಾ.ಸಂತೋಷ ಹಾನಗಲ್, ಸಾಹಿತಿ, ಪತ್ರಕರ್ತ ರಾಧಾಕೃಷ್ಣ.ಕೆ ಉಳಿಯತ್ತಡ್ಕ ಅತಿಥಿಗಳಾಗಿ ಭಾಗವಹಿಸುವರು. ಈ ಸಂದರ್ಭ ಖ್ಯಾತ ಸಾಹಿತಿ ಡಾ ರಮಾನಂದ ಬನಾರಿ ಸಾರಥ್ಯದಲ್ಲಿ ಪ್ರಕಟಗೊಳ್ಳುತ್ತಿರುವ 'ಕನ್ನಡಿಯಲ್ಲಿ ಕನ್ನಡಿಗ 'ಕೃತಿ ಸರಣಿಯ ಆರನೇ ಸಂಚಿಕೆಯನ್ನು ಸಾಹಿತಿ, ನಿವೃತ್ತ ಪ್ರಾಧ್ಯಾಪಿಕೆ ಡಾ. ಪ್ರಮೀಳಾ ಮಾಧವ್ ಬಿಡುಗಡೆಗೊಳಿಸುವರು.
ಕಾರ್ಯಕ್ರಮದ ಅಂಗವಾಗಿ ಕಾಸರಗೋಡಿನ ಕನ್ನಡದ ಇತಿಹಾಸ ಮತ್ತು ಸವಾಲುಗಳ ಕುರಿತು ವಿಚಾರಗೋಷ್ಠಿಯಲ್ಲಿ ಆಕಾಶವಾಣಿಯ ವಿಶ್ರಾಂತ ನಿರ್ದೇಶಕ ಡಾ. ಸದಾನಂದ ಪೆರ್ಲ ಅವರು 'ಕಾಸರಗೋಡಿನ ಕನ್ನಡ ಹೋರಾಟದ ಇತಿಹಾಸ', ಕಾಸರಗೋಡು ಸರ್ಕಾರಿ ಕಾಲೇಜಿನ ಪ್ರಾಧ್ಯಾಪಕ ರಾಧಾಕೃಷ್ಣ ಬೆಳ್ಳೂರು ಅವರು 'ಕನ್ನಡ ಸಾಹಿತ್ಯ ಮತ್ತು ಕನ್ನಡ ಅಸ್ಮಿತೆ', ಡಾ. ಬಾಲಕೃಷ್ಣ ಹೊಸಂಗಡಿ ಅವರು'ಶೈಕ್ಷಣಿಕ ಮತ್ತು ಔದ್ಯೋಗಿಕ ಸವಾಲುಗಳು', ಡಾ. ಶ್ರೀಧರ.ಎನ್ ಅವರು'ಸಾಂಸ್ಕೃತಿಕ ಮತ್ತು ರಾಜಕೀಯ ಸವಾಲುಗಳು',ಕು.ದೀಕ್ಷಿತ ಅವರು'ಕನ್ನಡ ವಿದ್ಯಾರ್ಥಿಗಳ ಸಮಸ್ಯೆಗಳು', ಅನಿರುದ್ಧ ಅವರು ಕನ್ನಡದ ಅಸ್ತಿತ್ವ-ವಿದ್ಯಾರ್ಥಿಗಳ ಪಾತ್ರ'ಎಂಬ ವಿಷಯಗಳ ಕುರಿತು ಪ್ರಬಂಧ ಮಂಡಿಸುವರು. ಸಹಾಯಕ ಪ್ರಾಧ್ಯಾಪಕ ಡಾ ಸುಜೀಶ್. ಎಸ್ ಸಮನ್ವಯಕಾರರಾಗಿರುವರು.
ಅಪರಾಹ್ನ ಸಾಂಸ್ಕೃತಿಕ ವಲಯದ ಕನ್ನಡ ಅಸ್ಮಿತೆಯ ಕುರಿತು ಸಂವಾದ ನಡೆಯುವುದು. ಸಂಜೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಖ್ಯಾತ ವಿಮರ್ಶಕ ಡಾ. ಎಸ್ .ಆರ್ ವಿಜಯಶಂಕರ್ ಬೆಂಗಳೂರು ಸಮಾರೋಪ ಭಾಷಣ ಮಾಡುವರು. ಕಾಸರಗೋಡು ಜಿಲ್ಲಾ ಕನ್ನಡ ಲೇಖಕರ ಸಂಘದ ಕಾರ್ಯಾಧ್ಯಕ್ಷ ಪೆÇ್ರ. ಪಿ .ಎನ್ ಮೂಡಿತ್ತಾಯ ಅಧ್ಯಕ್ಷತೆ ವಹಿಸುವರು.

