ಮುಳ್ಳೇರಿಯ: ಮಿಂಚಿಪದವು ಶ್ರೀ ಕಾವೇರಿಯಮ್ಮ ಮಹಾಲಿಂಗೇಶ್ವರ ದೇಗುಲದ ಪುನರ್ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮಕಲಶೋತ್ಸವ ಕಾರ್ಯಕ್ರಮದ ಅಂಗವಾಗಿ ಭಾನುವಾರ ಸಂಜೆ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತಿ ಶ್ರೀಪಾದಂಗಳವರು ಉದ್ಘಾಟಿಸಿ ಆಶೀರ್ವಚನ ನೀಡಿದರು.
ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ದಾಮೋದರ.ಎಂ ಅಧ್ಯಕ್ಷತೆ ವಹಿಸಿದ್ದರು. ಹಿಂದೂ ಐಕ್ಯವೇದಿ ರಾಜ್ಯ ಕಾರ್ಯಾಧ್ಯಕ್ಷ ವಲ್ಸನ್ ತಿಲ್ಲಂಗೇರಿ ಮತ್ತು ಧಾರ್ಮಿಕ ಚಿಂತಕ ಲಕ್ಷ್ಮೀಶ ಗಬ್ಲಡ್ಕ ವಿಶೇಷ ಉಪನ್ಯಾಸ ನೀಡಿದರು. ತಲಶ್ಶೇರಿ ಚೀಫ್ ಜುಡಿಶಿಯಲ್ ಮ್ಯಾಜಿಸ್ಟ್ರೇಟ್ ಕರುಣಾಕರ ಕೆಕೆಪುರ, ಮಾಜಿ ಶಾಸಕ ಬಾಲಕೃಷ್ಣ ಭಟ್ ಕೋಳಿಕ್ಕಜೆ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಮಧುಸೂದನ್ ಆಯರ್, ವಕೀಲ ಸುಬ್ಬಯ್ಯ ರೈ ಮಂಗಳೂರು, ಬಿಜೆಪಿ ವಲಯ ಕಾರ್ಯದರ್ಶಿ ಸುಧಾಮ ಗೋಸಾಡ, ಹನುಮಗಿರಿ ದೇಗುಲದ ಧರ್ಮದರ್ಶಿ ನನ್ಯ ಅಚ್ಯುತ ಮೂಡಿತ್ತಾಯ, ಬಿಪಿನ್ ದಾಸ್ ರೈ ಆದೂರು ಗುತ್ತು, ಮಲಬಾರ್ ದೇವಸ್ವಂ ಬೋರ್ಡ್ ಸದಸ್ಯ ಎ.ಕೆ.ಶಂಕರನ್ ಆದೂರು, ಅಡೂರು ದೇಗುಲದ ಕಾರ್ಯಾಧ್ಯಕ್ಷ ಪ್ರಭಾಕರ ನಾಯ್ಕ್, ವಕೀಲ. ಅನಂತರಾಮ ಕಾಸರಗೋಡು, ಆಡಳಿತ ಮೊಕ್ತೇಸರ ಶ್ರೀನಿವಾಸ ಕಕ್ಕಿಲ್ಲಾಯ, ವಾಮದೇವ ಪುಣಿಚಿತ್ತಾಯ, ದಾಮೋದರ ಕುಳದಪಾರೆ, ಜನಜಾಗೃತಿ ವೇದಿಕೆ ಕಾಸರಗೋಡು ತಾಲೂಕು ಅಧ್ಯಕ್ಷ ಅಖಿಲೇಶ್ ನಗುಮುಗಂ ಉಪಸ್ಥಿತರಿದ್ದರು. ವಲಯ ಅರಣ್ಯ ಅಧಿಕಾರಿ ಮಂಗಳೂರು ಸಂಚಾರಿದಳದ ಸಂತೋಷ್ ಕುಮಾರ್ ರೈ ಅವರನ್ನು ಈ ಸಂದರ್ಭದಲ್ಲಿ ಗೌರವಿಸಲಾಯಿತು.
ಮಾನಸ, ವೈಷ್ಣವಿ ಮತ್ತು ಶರಣ್ಯ ಪ್ರಾರ್ಥನೆ ಹಾಡಿದರು. ನಿವೃತ್ತ ಮುಖ್ಯ ಶಿಕ್ಷಕ ರಾಧಾಕೃಷ್ಣ.ಎಂ ಸ್ವಾಗತಿಸಿ, ಸೇವಾ ಸಮಿತಿ ಕಾರ್ಯದರ್ಶಿ ಮನೋಜ್ ಕುಮಾರ್.ಎಂ.ಸಿ ವಂದಿಸಿದರು. ಯತೀಶ್ ಕುಮಾರ್ ರೈ ಕಾರ್ಯಕ್ರಮ ನಿರೂಪಿಸಿದರು.

.jpg)
