HEALTH TIPS

ನರೇಗಾದಿಂದ ಕೈಬಿಟ್ಟಿದ್ದ 'ಮಹಾತ್ಮ ಗಾಂಧಿ' ಹೆಸರಲ್ಲಿ ಹೊಸ ಯೋಜನೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಇತ್ತೀಚೆಗೆ 'ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ' (ಮನರೇಗಾ) ಕಾಯ್ದೆಯನ್ನು ಮಾರ್ಪಾಡಿಸುವ ಮೂಲಕ ಗಾಂಧಿ ಹೆಸರು ಕೈಬಿಟ್ಟಿದ್ದರ ಕುರಿತು ಕಾಂಗ್ರೆಸ್‌ ಸೇರಿದಂತೆ ವಿರೋಧ ಪಕ್ಷಗಳು ಆಕ್ರೋಶ ಹೊರಹಾಕಿದ್ದವು.

ಇದೀಗ, ವಿರೋಧ ಪಕ್ಷಗಳಿಗೆ ತಿರುಗೇಟು ನೀಡುವ ಉದ್ದೇಶದಿಂದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಾವು ಮಂಡಿಸಿದ ಬಜೆಟ್‌ನಲ್ಲಿ 'ಮಹಾತ್ಮ ಗಾಂಧಿ' ಹೆಸರಿನಲ್ಲಿ ಹೊಸ ಯೋಜನೆಯೊಂದನ್ನು ಜಾರಿಗೆ ತಂದಿರುವುದಾಗಿ ಘೋಷಿಸಿದ್ದಾರೆ.

ಖಾದಿ, ಕೈಮಗ್ಗ ಮತ್ತು ಕರಕುಶಲ ವಲಯವನ್ನು ಬಲಪಡಿಸುವ ಉದ್ದೇಶದಿಂದ 'ಮಹಾತ್ಮ ಗಾಂಧಿ ಗ್ರಾಮ ಸ್ವರಾಜ್ ಯೋಜನೆ'ಯನ್ನು ಜಾರಿಗೆ ತರುವುದಾಗಿ ನಿರ್ಮಲಾ ಪ್ರಕಟಿಸಿದ್ದಾರೆ.

'ಮಹಾತ್ಮ ಗಾಂಧಿ ಗ್ರಾಮ ಸ್ವರಾಜ್ ಯೋಜನೆ'ಯ ಮೂಲಕ ಖಾದಿ ಉದ್ಯಮ ಮತ್ತು ಕರಕುಶಲ ವಸ್ತುಗಳ ಉತ್ಪಾದನೆ, ತರಬೇತಿ, ಕೌಶಲಾಭಿವೃದ್ಧಿ ಮತ್ತು ಜಾಗತಿಕ ಮಾರುಕಟ್ಟೆ ಪ್ರವೇಶಕ್ಕೆ ಅವಕಾಶ ಹೆಚ್ಚಿಸುವುದು ಸರ್ಕಾರದ ಉದ್ದೇಶವಾಗಿದೆ ಎಂದೂ ಅವರು ವಿವರಿಸಿದ್ದಾರೆ.

'ಒಂದು ಜಿಲ್ಲೆ, ಒಂದು ಉತ್ಪನ್ನ ಪರಿಕಲ್ಪನೆಯಡಿಯಲ್ಲಿ 'ಮಹಾತ್ಮ ಗಾಂಧಿ ಗ್ರಾಮ ಸ್ವರಾಜ್ ಯೋಜನೆ' ಅನುಷ್ಠಾನಕ್ಕೆ ಬರಲಿದೆ. ನೇಕಾರರು, ಗ್ರಾಮೀಣ ಕೈಗಾರಿಕೆಗಳು, ಗ್ರಾಮೀಣ ಪ್ರದೇಶದಲ್ಲಿರುವ ಯುವಕರಿಗೆ ಈ ಯೋಜನೆಯಿಂದ ಉತ್ತೇಜನ ಸಿಗಲಿದೆ. ಗ್ರಾಮೀಣ ಪ್ರದೇಶದ ಜನರ ಜೀವನಶೈಲಿಯನ್ನು ಬದಲಾಯಿಸಲು ಈ ಯೋಜನೆ ನೆರವಾಗಲಿದೆ. ಜತೆಗೆ, ಭಾರತದ ಪಾರಂಪರಿಕ ಉತ್ಪನ್ನಗಳನ್ನು ಜಾಗತಿಕ ಮಟ್ಟದಲ್ಲಿ ಪರಿಚಯಿಸಲು ಸಹಾಯವಾಗಲಿದೆ' ಎಂದೂ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಕೇಂದ್ರ ಸರ್ಕಾರ ಈಚೆಗೆ 'ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ' (ಮನರೇಗಾ) ಕಾಯ್ದೆಯನ್ನು ಮಾರ್ಪಾಡು ಮಾಡುವ ಮೂಲಕ ಹೊಸದಾಗಿ 'ವಿಕಸಿತ ಭಾರತ - ಉದ್ಯೋಗ ಖಾತರಿ ಮತ್ತು ಜೀವನೋಪಾಯ ಮಿಷನ್‌ ಗ್ರಾಮೀಣ' (ವಿಬಿ- ಜಿ ರಾಮ್‌ ಜಿ) ಕಾಯ್ದೆಯನ್ನು ಪರಿಚಯಿಸಿತ್ತು.

ಮನರೇಗಾ ಕಾಯ್ದೆಯಿಂದ ಮಹಾತ್ಮ ಗಾಂಧೀಜಿ ಅವರ ಹೆಸರನ್ನು ತೆಗೆದು ಹಾಕಿದ್ದನ್ನು ಖಂಡಿಸಿ ವಿರೋಧ ಪಕ್ಷಗಳು ಪ್ರತಿಭಟನೆ ನಡೆಸಿದ್ದವು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries