HEALTH TIPS

ಎಸ್‌ಸಿ ಮಹಿಳೆ ಮೇಲೆ ಅತ್ಯಾಚಾರ: ಸಮಾಜವಾದಿ ಪಕ್ಷದ ರಾಷ್ಟ್ರೀಯ ವಕ್ತಾರನ ಬಂಧನ

ಲಖನೌ: ಉತ್ತರ ಪ್ರದೇಶದ ಬಾರಾಬಂಕಿ ಜಿಲ್ಲೆಯ ಸಫ್ದರ್ಗಂಜ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅತ್ಯಾಚಾರ, ಕಿರುಕುಳ ಮತ್ತು ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಾಜವಾದಿ ಪಕ್ಷದ ರಾಷ್ಟ್ರೀಯ ವಕ್ತಾರ ಮನೋಜ್ ಯಾದವ್ ಅವರನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

ತಮ್ಮ ವಿರುದ್ಧ ಅತ್ಯಾಚಾರ ಆರೋಪ ಕೇಳಿಬಂದ ನಂತರ ಲಖನೌನ ಗೋಮತಿ ನಗರದಿಂದ ನಾಪತ್ತೆಯಾಗಿದ್ದ ಯಾದವ್ ಅವರನ್ನು ಶುಕ್ರವಾರ ಬೆಳಗ್ಗೆ 10:30 ರ ಸುಮಾರಿಗೆ ಬಂಧಿಸಿ, ಭಾರೀ ಪೊಲೀಸ್ ಭದ್ರತೆಯ ನಡುವೆ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶ ನಿತೀಶ್ ರೈ ಅವರ ಮುಂದೆ ಹಾಜರುಪಡಿಸಲಾಯಿತು.

ಭಾಗಲೇಪುರ್ವಾ ಗ್ರಾಮದ ಪರಿಶಿಷ್ಟ ಜಾತಿಯ ಮಹಿಳೆಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಯಾದವ್ ವಿರುದ್ಧ ಅತ್ಯಾಚಾರ, ಹಲ್ಲೆ, ಕಿರುಕುಳ ಮತ್ತು ಎಸ್‌ಸಿ/ಎಸ್‌ಟಿ ಕಾಯ್ದೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಕೇಸ್ ದಾಖಲಿಸಲಾಗಿದ್ದು, ನ್ಯಾಯಾಲಯ ಆರೋಪಿಯನ್ನು ಏಳು ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಫೆಬ್ರವರಿ 11 ರಂದು ಸಮಾಜವಾದಿ ಪಕ್ಷದ ವಕ್ತಾರರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಸಫ್ದರ್ಗಂಜ್ ಸ್ಟೇಷನ್ ಹೌಸ್ ಆಫೀಸರ್ ಅಮರ್ ಚೌರಾಸಿಯಾ ಹೇಳಿದ್ದಾರೆ.

ದೂರು ನೀಡಿದ್ದಕ್ಕೆ ಲಖೌನಲ್ಲಿ ಚಾಲಕನಾಗಿ ಕೆಲಸ ಮಾಡುತ್ತಿರುವ ತನ್ನ ಮಗ ವೀರೇಂದ್ರನನ್ನು ಸಹ ಟಾರ್ಗೆಟ್ ಮಾಡಿದ್ದಾರೆ ಎಂದು ದೂರುದಾರರು ಆರೋಪಿಸಿದ್ದಾರೆ. ಯಾದವ್ ಹಲವು ಬಾರಿ ತನ್ನ ಮಗನನ್ನು ಅಡ್ಡಗಟ್ಟಿ ಹಲ್ಲೆ ನಡೆಸಿ, ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries