HEALTH TIPS

ಶಿಕ್ಷಕರ ಆಕ್ಷೇಪಾರ್ಹ ಮೀಮ್‌ ರಚನೆ: ವಿದ್ಯಾರ್ಥಿಗೆ ಪರೀಕ್ಷೆ ಬರೆಯಲು ಅವಕಾಶ

ನವದೆಹಲಿ: ಶಿಕ್ಷಕರ ಕುರಿತು ಆಕ್ಷೇಪಾರ್ಹ ಪೋಸ್ಟ್‌ ರಚಿಸಿ, ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಕಾರಣಕ್ಕಾಗಿ ಶಾಲೆಯಿಂದ ಹೊರಗೆ ಹಾಕಲಾಗಿದ್ದ 10ನೇ ತರಗತಿ ವಿದ್ಯಾರ್ಥಿಗೆ ಪರೀಕ್ಷೆ ಬರೆಯಲು ಸುಪ್ರೀಂಕೋರ್ಟ್‌ ಅವಕಾಶ ನೀಡಿದೆ.

ವಿದ್ಯಾರ್ಥಿಗೆ ಪರೀಕ್ಷೆ ಬರೆಯಲು ಪ್ರವೇಶಪತ್ರ ನೀಡುವಂತೆ 'ಕೌನ್ಸಿಲ್ ಫಾರ್ ದಿ ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ ಎಕ್ಸಾಮಿನೇಷನ್ಸ್‌ಗೆ (ಸಿಐಎಸ್‌ಸಿಇ) ಸೂಚನೆ ನೀಡಿದೆ.

ವಿದ್ಯಾರ್ಥಿಯ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಬಿ.ವಿ.ನಾಗರತ್ನ ಹಾಗೂ ಉಜ್ಜಲ್‌ ಭುಯಾನ್‌ ನೇತೃತ್ವದ ನ್ಯಾಯಪೀಠ, 'ವಿದ್ಯಾರ್ಥಿ ಈಗಾಗಲೇ ಪರೀಕ್ಷೆ ಬರೆಯಲು ಸಿಐಎಸ್‌ಸಿಇಯಲ್ಲಿ ನೋಂದಣಿ ಮಾಡಿಕೊಂಡಿದ್ದು, ಅವಕಾಶ ಕೊಡದಿದ್ದರೆ, ಆತನ ಶೈಕ್ಷಣಿಕ ವರ್ಷ ವ್ಯರ್ಥವಾಗಲಿದೆ' ಎಂದು ತಿಳಿಸಿದ್ದಾರೆ.

2024-25ರಲ್ಲಿ ವಿದ್ಯಾರ್ಥಿ 9ನೇ ತರಗತಿಯಲ್ಲಿ ಕಲಿಯುತ್ತಿದ್ದ ವೇಳೆ ಆಕ್ಷೇಪಾರ್ಹ ಪೋಸ್ಟ್‌ ಹಂಚಿಕೊಂಡಿದ್ದಕ್ಕೆ ಶಾಲೆಯಿಂದ ಹೊರಗೆ ಹಾಕಲಾಗಿತ್ತು. ಬಾಲಕನ ತಂದೆಯು ಮಗನನ್ನು ಹೊರಹಾಕಿದ್ದನ್ನು ಮಧ್ಯಪ್ರದೇಶ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು.

ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌, ಶಾಲೆಯ ನಿರ್ಧಾರವನ್ನು ಎತ್ತಿಹಿಡಿದಿತ್ತು. ಇದಾದ ಬಳಿಕ ವಿದ್ಯಾರ್ಥಿಯು ಖಾಸಗಿಯಾಗಿ ಓದು ಮುಂದುವರಿಸಿದ್ದನು.

ಫೆಬ್ರುವರಿ 17ರಂದು ಆರಂಭವಾಗಲಿರುವ ಪರೀಕ್ಷೆಗೆ ಹಾಜರಾಗಲು ವಿದ್ಯಾರ್ಥಿಗೆ ಸೂಕ್ತ ಅವಕಾಶ ನೀಡುವಂತೆ ಶಾಲಾ ಆಡಳಿತ ಮಂಡಳಿ ಹಾಗೂ ಸಿಐಎಸ್‌ಸಿಇಗೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries