HEALTH TIPS

ಲೋಕಸಭೆ: ಆರನೇ ದಿನವೂ ಕಲಾಪಕ್ಕೆ ಅಡ್ಡಿ

ನವದೆಹಲಿ: ಕೇಂದ್ರ ಬಜೆಟ್‌ ಚರ್ಚೆಗೆ ಮುನ್ನ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರಿಗೆ ಮಾತನಾಡಲು ಅವಕಾಶ ನೀಡಬೇಕು ಎಂಬ ವಿಷಯದ ಬಗ್ಗೆ ಆಡಳಿತಾರೂಢ ಎನ್‌ಡಿಎ ಹಾಗೂ ವಿಪಕ್ಷ ಇಂಡಿಯಾ ಮೈತ್ರಿಕೂಟ ಸೋಮವಾರವೂ ಒಮ್ಮತಕ್ಕೆ ಬರಲಿಲ್ಲ. ಇದರಿಂದಾಗಿ, ಸತತ ಆರನೇ ದಿನವೂ ಲೋಕಸಭಾ ಕಲಾಪಕ್ಕೆ ಭಂಗವಾಯಿತು.

ಜನರಲ್ ಎಂ.ಎನ್. ನರವಣೆ ಪುಸ್ತಕ ಸೇರಿದಂತೆ ವಿವಾದಾತ್ಮಕ ವಿಷಯಗಳನ್ನು ಪ್ರಸ್ತಾಪಿಸಲು ತಮಗೆ ಅವಕಾಶ ನೀಡುವ ಕುರಿತು ಒಪ್ಪಂದ ಆಗಿದೆ ಎಂದು ರಾಹುಲ್ ಗಾಂಧಿ ಪ್ರತಿಪಾದಿಸಿದರು. ವಿಪಕ್ಷ ನಾಯಕನ ಹೇಳಿಕೆಯನ್ನು ಬಿಜೆಪಿ ತಳ್ಳಿ ಹಾಕಿದ್ದು, ಅಂತಹ ಯಾವುದೇ ಒಪ್ಪಂದ ಆಗಿಲ್ಲ ಎಂದು ಸ್ಪಷ್ಟಪಡಿಸಿದೆ. ಇನ್ನೊಂದೆಡೆ, ಲೋಕಸಭಾಧ್ಯಕ್ಷ ಓಂ ಬಿರ್ಲಾ ಅವರದ್ದು ಪಕ್ಷಪಾತದ ಧೋರಣೆ ಎಂದು ಆರೋಪಿಸಿರುವ ಕಾಂಗ್ರೆಸ್‌, ಅವರನ್ನು ಪದಚ್ಯುತಗೊಳಿಸುವಂತೆ ಸಹಿ ಸಂಗ್ರಹಿಸಲು ಆರಂಭಿಸಿತು.

ಜನರಲ್ ನರವಣೆ ಅವರ ಪುಸ್ತಕದ ಕುರಿತು ರಾಹುಲ್‌ಗೆ ಮಾತನಾಡಲು ಅವಕಾಶ ನೀಡದ ಕಾರಣ ಕೆಳಮನೆಯಲ್ಲಿ ಗದ್ದಲ ಉಂಟಾಯಿತು. ಆದರೆ, ಕೇಂದ್ರ ಬಜೆಟ್‌ ಕುರಿತ ಚರ್ಚೆಗೆ ಅವಕಾಶ ಕಲ್ಪಿಸುವ ಸಂಬಂಧ ಲೋಕಸಭಾಧ್ಯಕ್ಷರು ವಿರೋಧ ಪಕ್ಷದ ನಾಯಕ ಮತ್ತು ಇತರ ನಾಯಕರೊಂದಿಗೆ ಒಂದೆರಡು ಸಭೆಗಳನ್ನು ನಡೆಸಿದರು.

ಬಜೆಟ್‌ ಚರ್ಚೆಗೆ ಮುನ್ನ ಕೆಲವೊಂದು ವಿಷಯಗಳನ್ನು ಪ್ರಸ್ತಾಪಿಸಲು ಲೋಕಸಭಾಧ್ಯಕ್ಷರ ಜತೆಗಿನ ಸಭೆಯಲ್ಲಿ ಒಪ್ಪಂದ ಆಗಿದೆ. ಆದರೆ, ಸಭಾಧ್ಯಕ್ಷರು ಈಗ ಒಪ್ಪಂದ ಉಲ್ಲಂಘಿಸಿದ್ದಾರೆ ಎಂದು ರಾಹುಲ್‌ ಅವರು ಸದನದಲ್ಲಿ ಆಕ್ರೋಶ ವ್ಯಕ್ತಪಡಿಸಿದರು.

'ಅಂತಹ ಯಾವುದೇ ಒಪ್ಪಂದದ ಬಗ್ಗೆ ನನಗೆ ತಿಳಿದಿಲ್ಲ. ಈ ಬಗ್ಗೆ ಕಾರ್ಯಸೂಚಿಯಲ್ಲೂ ಉಲ್ಲೇಖ ಇಲ್ಲ. ನೋಟಿಸ್‌ ಇಲ್ಲದೆ ಯಾವುದೇ ವಿಷಯ ಪ್ರಸ್ತಾಪಿಸಲು ಯಾರಿಗೂ ಅವಕಾಶ ನೀಡುವುದಿಲ್ಲ' ಎಂದು ಸಭಾಧ್ಯಕ್ಷರ ಪೀಠದಲ್ಲಿದ್ದ ಬಿಜೆಪಿ ಸದಸ್ಯೆ ಸಂಧ್ಯಾ ರೇ ಸ್ಪಷ್ಟಪಡಿಸಿದರು.

ಈ ಹಂತದಲ್ಲಿ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಮಧ್ಯಪ್ರವೇಶಿಸಿ, 'ಅಂತಹ ಯಾವುದೇ ಒಪ್ಪಂದ ಆಗಿಲ್ಲ. ಸ್ಪೀಕರ್‌ ಬಗ್ಗೆ ರಾಹುಲ್‌ ಏನಾದರೂ ಹೇಳಲು ಬಯಸಿದರೆ, ಆಗ ಬಿರ್ಲಾ ಕೂಡ ಸದನದಲ್ಲಿ ಹಾಜರಿರಬೇಕು' ಎಂದರು. 'ಸ್ಪೀಕರ್ ವಿರುದ್ಧ ಆರೋಪಗಳನ್ನು ಮಾಡಿದರೆ, ಸದನದ ಇತರ ನಾಯಕರಿಗೂ ಮಾತನಾಡಲು ಅವಕಾಶ ನೀಡಲಾಗುವುದು ಮತ್ತು ಸರ್ಕಾರವು ಪ್ರತಿಕ್ರಿಯಿಸಲಿದೆ' ಎಂದರು.

ಎರಡೂ ಕಡೆಯವರು ತಮ್ಮ ನಿಲುವಿನಿಂದ ಹಿಂದೆ ಸರಿಯದ ಕಾರಣ, ರೇ ಅವರು ಕಲಾಪವನ್ನು ದಿನದ ಮಟ್ಟಿಗೆ ಮುಂದೂಡಿದರು. ಇದಕ್ಕೂ ಮುನ್ನ ಕಲಾಪವನ್ನು ಎರಡು ಸಲ ಮುಂದೂಡಲಾಗಿತ್ತು.

ಆ ಬಳಿಕ ರಾಹುಲ್‌ ಅವರು ಟಿಎಂಸಿಯ ಅಭಿಷೇಕ್ ಬ್ಯಾನರ್ಜಿ, ಸಮಾಜವಾದಿ ಪಕ್ಷದ ಅಖಿಲೇಶ್ ಯಾದವ್ ಮತ್ತು ಡಿಎಂಕೆಯ ಟಿ.ಆರ್. ಬಾಲು ಅವರೊಂದಿಗೆ ಓಂಬಿರ್ಲಾ ಅವರನ್ನು ಭೇಟಿಯಾದರು. ಈ ವೇಳೆ, ಸದನದ ಬಿಕ್ಕಟ್ಟು ಬಗೆಹರಿಸುವ ಬಗ್ಗೆ ಚರ್ಚೆ ನಡೆಯಿತು.

'ನರವಣೆ ಅವರ ಪುಸ್ತಕ, ಪುಸ್ತಕಗಳನ್ನು ಉಲ್ಲೇಖಿಸಿ ಬಿಜೆಪಿ ಸಂಸದ ನಿಶಿಕಾಂತ್ ದುಬೆ ಮಾಡಿರುವ ಆರೋಪಗಳು, ಎಂಟು ಸಂಸದರ ಅಮಾನತು ಮತ್ತು ಪ್ರಧಾನಿ ಮೇಲೆ ಸಂಸದರು ದಾಳಿಗೆ ಸಂಚು ರೂಪಿಸಿದ್ದರು ಎಂಬ ಆರೋಪಗಳ ಬಗ್ಗೆ ‍ಪ್ರಸ್ತಾಪಿಸಲು ಅವಕಾಶ ನೀಡುವ ಬಗ್ಗೆ ಒಪ್ಪಂದ ಆಗಿದೆ' ಎಂದು ರಾಹುಲ್ ಗಾಂಧಿ ಸುದ್ದಿಗಾರರಿಗೆ ತಿಳಿಸಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries