HEALTH TIPS

ಉದ್ಯಾವರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಾರ್ಷಿಕೋತ್ಸವ

ಮಂಜೇಶ್ವರ: ಮಂಜೇಶ್ವರ ಗೇಟ್ ಶಾಲೆ ಎಂದೇ ಪ್ರಸಿದ್ಧಿ ಪಡೆದಿರುವ ಉದ್ಯಾವರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಾರ್ಷಿಕೋತ್ಸವ ಶನಿವಾರ ವಿವಿಧ ಕಾರ್ಯಕ್ರಮಗಳೊಂದಿಗೆ ನಡೆಯಿತು.

ಶಾಸಕ ಎಕೆಎಂ ಅಶ್ರಫ್ ಮುಖ್ಯ ಅತಿಥಿಯಾಗಿ ಔಪಚಾರಿಕವಾಗಿ ಉದ್ಘಾಟಿಸಿದರು. ಸಾರ್ವಜನಿಕ ಶಿಕ್ಷಣದ ಶ್ರೇಷ್ಠತೆ ಹಾಗೂ ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ  ಶಾಲೆಯ ಬದ್ಧತೆಯನ್ನು ಅವರು ಶ್ಲಾಘಿಸಿದರು. ಶಿಕ್ಷಣವು ಪಠ್ಯಪುಸ್ತಕಗಳಿಗೆ ,ಬಹುಮಾನಗಳಿಗೆ ಸೀಮಿತವಾಗಿರದೆ ವಿದ್ಯಾರ್ಥಿಗಳಲ್ಲಿ ಮೌಲ್ಯಗಳು,ಸೃಜನಶೀಲತೆ ,ಆತ್ಮವಿಶ್ವಾಸವನ್ನು ಹೆಚ್ಚಿಸಲು ಸಹಾಯ ಮಾಡಬೇಕೆಂದು ಅವರು ಒತ್ತಿ ಹೇಳಿದರು. 


ಮಂಜೇಶ್ವರ ಗ್ರಾಮ ಪಂಚಾಯತಿ ಅಧ್ಯಕ್ಷ ಬಶೀರ್ ಕನಿಲ ಅಧ್ಯಕ್ಷತೆ ವಹಿಸಿ ವಿದ್ಯಾರ್ಥಿಗಳನ್ನು ಅಭಿನಂದಿಸಿ ಅವರ ಪ್ರತಿಭೆಗಳನ್ನು ವ್ಯಕ್ತಪಡಿಸಲು

ಮತ್ತು ಆತ್ಮವಿಶ್ವಾಸ ಬೆಳೆಸಲು ವಾರ್ಷಿಕೋತ್ಸವಗಳು ವೇದಿಕೆಯಾಗಿದೆ ಎಂದರು. 

ಕಾಸರಗೋಡು ಜಿಲ್ಲಾ ಶಿಕ್ಷಣ  ಉಪನಿರ್ದೇಶಕ  ಇಬ್ರಾಹಿಂ ಬಿ ಅವರು, ಸರ್ಕಾರಿ ಶಾಲೆಗಳು ಎಲ್ಲಾ ಸೌಲಭ್ಯಗಳೊಂದಿಗೆ ಶಿಕ್ಷಣ ರಕ್ಷಣೆಯಲ್ಲಿ ಬೆಂಬಲವಾಗಿದೆ. ಈ ಶಾಲೆ ಅಧ್ಯಾಪಕರು ಮತ್ತು ರಕ್ಷಕ ಶಿಕ್ಷಕ ಸಂಘ ಮಾದರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ಅಭಿಪ್ರಾಯಪಟ್ಟರು. ಮಂಜೇಶ್ವರ ಉಪಜಿಲ್ಲಾ ವಿದ್ಯಾಧಿಕಾರಿ  ಜಾರ್ಜ್ ಕ್ರಾಸ್ತ ಶುಭ ಹಾರೈಸಿದರು. ಈ ವರ್ಷ ನಿವೃತ್ತರಾಗಲಿರುವ ಜಿಲ್ಲಾ ಶಿಕ್ಷಣ ಉಪನಿರ್ದೇಶಕರು ಮತ್ತು ಉಪಜಿಲ್ಲಾ ವಿದ್ಯಾಧಿಕಾರಿಗಳನ್ನು ಶಾಲೆಯ ವತಿಯಿಂದ ಗೌರವಿಸಲಾಯಿತು.ಹಿಂದೆ ಗೇಟ್ ಶಾಲೆಯಲ್ಲಿ  ಶಿಕ್ಷಕಿಯಾಗಿದ್ದು ಪ್ರಸ್ತುತ ಜಿ.ಎಲ್.ಪಿ  ಕಿದೂರು ಶಾಲೆಯ ಮುಖ್ಯಶಿಕ್ಷಕಿ  ವೀಣಾ ಟೀಚರ್ ಅವರನ್ನು ಗೌರವಿಸಲಾಯಿತು. 

ರಾಜ್ಯಪ್ರಶಸ್ತಿ ವಿಜೇತ ಶಿಕ್ಷಕ, ಉದ್ಯಾವರ ಸರ್ಕಾರಿ ಶಾಲಾ ಮುಖ್ಯೋಪಾಧ್ಯಾಯ ನಾರಾಯಣ ದೇಲಂಪಾಡಿ ಮಾತನಾಡಿ "ಮಾತೃತ್ವ  ಮಾದರಿಯಾದರೆ ಮಕ್ಕಳು ಸರಿಯಾದ ವಿಕಾಸ ಹೊಂದುವರೆಂದು ಅಭಿಪ್ರಾಯಪಟ್ಟರು.  ಮಂಜೇಶ್ವರ ಬ್ಲಾಕ್ ಪಂಚಾಯತಿ ಅಧ್ಯಕ್ಷ ಸೈಫುಲ್ಲಾ ತಂಙಳ್, ಪಂಚಾಯತಿ ಸದಸ್ಯ  ಪ್ರಕಾಶ್, ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ  ಅಬೂಬಕರ್, ಎಂ ಪಿ ಟಿ ಎ ಅಧ್ಯಕ್ಷೆ ಫಾತಿಮತ್ ಝೌರ, ಮೋಹನ್ ಶೆಟ್ಟಿ ತುಮಿನಾಡು, ಶಾಲಾ ಅಭಿವೃಧಿ ಸಮಿತಿ ಟಕಾರ್ಯದರ್ಶಿ ಅಬ್ದುಲ್ ಲತೀಫ್ ಉದ್ಯಾವರ, ರೇಖಾ, ಮುಮ್ತಾಜ್ ಸಮೀರ ಮೊದಲಾದವರುಉಪಸ್ಥಿತರಿದ್ದು ಶುಭ ಹಾರೈಸಿದರು. ಮುಖ್ಯೋಪಾಧ್ಯಾಯ  ಶಂಕರನಾರಾಯಣ ಭಟ್ ಸ್ವಾಗತಿಸಿ, ಅಧ್ಯಾಪಕ  ಪ್ರವೀಣ್ ಕುಮಾರ್ ವಂದಿಸಿದರು. ಶಾಲಾ ಹಿರಿಯ ಶಿಕ್ಷಕಿ ನೀತಾ ಕಾರ್ಯಕ್ರಮ ನಿರೂಪಿಸಿದರು. ಶಾಲಾ ಬೆಂಬಲ ಸಮಿತಿ ಅಧ್ಯಕ್ಷ  ಶಂಸುದ್ಧೀನ್, ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷ ಅಬ್ದುಲ್ ಸಲಾಮ್, ರಹಮತುಲ್ಲಾ, ಹಳೆ ವಿಧ್ಯಾರ್ಥಿ ಸಂಘದ ಕಾರ್ಯದರ್ಶಿ ನೌಶಾದ್, ಮಾಜಿ ಪಿ ಟಿ ಎ ಅಧ್ಯಕ್ಷ ಮೊಹಮ್ಮದ್ ಅಶ್ರಫ್ ಉಪಸ್ಥಿತರಿದ್ದರು. 

ಬಳಿಕ ನೃತ್ಯಗಳು, ಹಾಡುಗಳು ಮತ್ತು ಕಿರು ನಾಟಕಗಳು ಸೇರಿದಂತೆ ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಿತು. 



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries